Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ

ಮಣಿಪಾಲ: ಅನಂತನಗರದಲ್ಲಿರುವ Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಯು ಇಂಗ್ಲೀಷ್ ಬಲ್ಲವರಾಗಿರಬೇಕು. ಆಸಕ್ತರು ಸಿವಿ ಮತ್ತು ರೆಸ್ಯೂಮ್ ಅನ್ನು [email protected] ಗೆ ಇ ಮೇಲ್ ಮಾಡಬಹುದು. ಸಂಪರ್ಕ: 9591982777

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಫೆಬ್ರವರಿ 14: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳರೋಗಿಯಾಗಿ ದಾಖಲಾಗಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯು 2023ರ ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಹೆಬ್ರಿ: ವ್ಯಕ್ತಿ ನಾಪತ್ತೆ

ಉಡುಪಿ, ಫೆಬ್ರವರಿ 14: ಕೇರಳ ಮೂಲದ ಜೋನಿ ಸೆಬಸ್ಟೀನ್ (49) ಎಂಬ ವ್ಯಕ್ತಿಯು ಹೆಬ್ರಿ ತಾಲೂಕಿ ಅಲ್ಬಾಡಿ ಗ್ರಾಮದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು ಫೆಬ್ರವರಿ 11 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಪೂರ ಸದೃಢಕಾಯ ಮೈ ಕಟ್ಟು , ಬಿಳಿಯ ಗೋಧಿ ಮೈ ಬಣ್ಣ ಹೊಂದಿದ್ದು, ಇಂಗ್ಲೀಷ್ ಹಾಗೂ ಮಲಿಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಯಣ ಪೊಲೀಸ್ ಠಾಣೆ ದೂ.ಸಂ:08259-280299, ಮೊ.ನಂ […]

ಮಲ್ಪೆ: ಮೈಗೆ ಬೆಂಕಿ ತಗುಲಿ ಮಹಿಳೆ ಮೃತ್ಯು

ಉಡುಪಿ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕೊಡವೂರಿನಲ್ಲಿ ನಡೆದಿದೆ.ಮೃತರನ್ನು ಕೊಡವೂರು ನಿವಾಸಿ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಇವರು ಫೆ.13ರಂದು ಮನೆಯ ವಠಾರದ ಕಸದ ರಾಶಿಗೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಸಕ್ಕೆ ಸೀಮೆ ಎಣ್ಣೆ ಹಾಕುವಾಗ ಆಕಸ್ಮಿಕವಾಗಿ ಸೀಮೆಎಣ್ಣೆ ನೈಟಿಗೆ ತಾಗಿ ಸಾರಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮನೆಯವರು ಹೊರಗೆ ಬಂದು ಬೆಂಕಿ ಆರಿಸಿ ನೋಡಿದಾಗ ಸಾರಾ ಅವರ […]

ಮಣಿಪಾಲ: “ನಾರಿ ಶೃಂಗ” ಪೂರ್ವಪ್ರಾಥಮಿಕ ಬೋಧನಾ ಸಾಧನಗಳ ಪ್ರದರ್ಶನ ಉದ್ಘಾಟಿಸಿದ ಡಾ.ಪುಷ್ಪಾ ಕಿಣಿ

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಕ್ರಿಸ್ಟಲ್ ಬಿಜ್‍ಹಬ್, ಒಂದನೇ ಮಹಡಿ, ಡಿಸಿ ಕಛೇರಿ ಬಳಿ, ಮಣಿಪಾಲ, ಪೂರ್ವಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ “ನಾರಿ ಶೃಂಗ”ಎಂಬ ಶೀರ್ಷಿಕೆಯ ಅಡಿಯಲ್ಲಿ ಬೋಧನಾ ಸಾಧನಗಳ ಪ್ರದರ್ಶನವನ್ನು ಕೆ.ಎಂ.ಸಿ.ಯ ಮಕ್ಕಳ ವಿಭಾಗದ ಮಕ್ಕಳ ತಜ್ಞೆ ಡಾ. ಪುಷ್ಪಾ ಕಿಣಿ ಅವರು ಫೆ.10 ರಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳೊಂದಿಗೆ ಬೆರೆತು, ಪ್ರಯೋಗಿಕ ವಸ್ತುಗಳ ನೆರವಿನಿಂದ ಮಾಹಿತಿ ನೀಡಬೇಕು. ಈ ಆಧುನಿಕ ಯುಗದಲ್ಲಿ ಪೂರ್ವಪ್ರಾಥಮಿಕ ವಿದ್ಯಾರ್ಥಿಗಳಿಗೂ ಒತ್ತಡ ನಿರ್ವಹಣಾ ತಂತ್ರಗಳ ಬಳಕೆ […]