ಕಾಪು ಲೈಟ್ ಹೌಸ್‌ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ, ಫೆಬ್ರವರಿ 28: ಕಾಪು ಲೈಟ್‌ಹೌಸ್‌ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಕೇಂದ್ರ ಸರ್ಕಾರದ ಪೋರ್ಟ್ಸ್ ಶಿಪ್ಪಿಂಗ್ ಅಂಡ್ ವಾಟರ್ ವೇಸ್, ಡೈರೆಕ್ಟರೇಟ್ ಜನರಲ್ ಆಫ್ ಲೈಟ್ ಹೌಸಸ್ ಅಂಡ್ ಲೈಟ್ ಶಿಪ್ಸ್ ಇಲಾಖೆಯ ವತಿಯಿಂದ ಕಾಪು ದೀಪಸ್ತಂಭಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರ ಉದ್ಘಾಟನೆಯನ್ನು ತಮಿಳುನಾಡಿನ […]

ಕಾರ್ಕಳ: ಎಳ್ಳಾರೆ ಗ್ರಾಮದ ಯುವತಿ ನಾಪತ್ತೆ

ಉಡುಪಿ, ಫೆಬ್ರವರಿ 28: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ […]

ಪೋಷಕರು ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ಹಾಕಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ.

ಉಡುಪಿ: ಮಾರ್ಚ್ 3 ರಂದು ಸಮೀಪದ ಪಲ್ಸ್ ಪೊಲಿಯೋ ಲಸಿಕಾ ಕೇಂದ್ರಗಳೀಗೆ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ದು ಪೊಲಿಯೋ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು.   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.   ರಾಷ್ಟ್ರೀಯ ಪಲ್ಸ್ […]

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು

  ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು.    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.    ಗ್ರಾಮೀಣ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕಾಪು ನಿವಾಸಿ ರವಿ (51) ಎಂಬ ವ್ಯಕ್ತಿಯು ಎರಡು ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ ಅಮ್ಮ ಅನಾಥಾಲಯದಲ್ಲಿ ವಾಸವಿದ್ದು ಫೆಬ್ರವರಿ 22 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, […]