ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ ನಿಧನ

ಕಾರ್ಕಳ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83) ಫೆ.25ರಂದು ಎಸ್.ವಿ.ಟಿ. ಶಾಲಾ ರಸ್ತೆಯ ಸೇವಾಕೇಂದ್ರದಲ್ಲಿ ನಿಧನರಾದರು. ಮೃತರು 35ವರ್ಷಗಳಿಂದ ಈಶ್ವರೀಯ ಸೇವೆಯಲ್ಲಿ ತತ್ಪರರಾಗಿದ್ದರು.
ಮೂಡುಬಿದಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೇರಳದಲ್ಲಿ ಪ್ರಿಯಕರನೊಂದಿಗೆ ಪತ್ತೆ.

ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶುಕ್ರವಾರ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತನ್ನ ಪ್ರಿಯಕರನನ್ನು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರು ನಿವಾಸಿ 19ವರ್ಷದ ಆದಿರಾ ಎಂಬಾಕೆ ಶುಕ್ರವಾರ ಬೆಳಿಗ್ಗೆ ಕಾಣೆಯಾಗಿದ್ದಳು. ಅಂದು ತನ್ನ ಸಹಪಾಠಿಗಳೊಂದಿಗೆ ಕಾಲೇಜ್ ಬಸ್ ನಲ್ಲಿ ಬಂದು ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಳಿದಿದ್ದಳು. ಆ ಬಳಿಕ ಅಲ್ಲಿಂದ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡುಬಿದಿರೆ ಠಾಣೆಯಲ್ಲಿ […]
ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳನ್ನು ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ. 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ […]
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ.

ಮೂಡುಬಿದಿರೆ: ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಶುಕ್ರವಾರದಿಂದ ಕಾಣೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ನಾಪತ್ತೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು, ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿದ್ದಾಳೆ. ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ […]
ನಟ ರಕ್ಷಿತ್ ಶೆಟ್ಟಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.