ಬೆಂಗಳೂರು:ಮುಂಜಾಗ್ರತಾ ಕ್ರಮ ವಹಿಸಿದರೆ HMP ವೈರಸ್​ ಬಗ್ಗೆ ಆತಂಕಪಡುವ ಅಗತ್ಯವಿಲ್ಲ:ಸಚಿವ ಗುಂಡೂರಾವ್

ಬೆಂಗಳೂರು: ಕೊರೊನಾ ಕೊಟ್ಟ ಹೊಡೆತದಿಂದ ಜನರು ಇನ್ನೂ ಹೊರಬಂದಿಲ್ಲ. ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ರಣಕೇಕೆ ಹಾಕುತ್ತಿದೆಯಂತೆ. ಹೀಗಿರುವಾಗ ಬೆಂಗಳೂರಿನಲ್ಲೂ ಹೆಚ್​​ಎಂಪಿ ವೈರಸ್ ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ. ಆರೋಗ್ಯಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. […]

ಉಡುಪಿ:ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ […]

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿಯಿಂದ ಮಣಿಪಾಲ್‌ಗೆ ಹೋಗುವ ರಸ್ತೆ ಅಗಲೀಕರಣ […]

ಬ್ರಹ್ಮಾವರದ ಶೆಣೈ ಬೇಕರಿಯಲ್ಲಿ ಕೆಲಸ ಮಾಡಲು ಜನ ಬೇಕಾಗಿದ್ದಾರೆ

ಬ್ರಹ್ಮಾವರ:ಬ್ರಹ್ಮಾವರದಲ್ಲಿ ತಿಂಡಿ ತಿನಿಸುಗಳ ಲೈನ್ ಸೇಲ್ ಮಾಡಲು ಅನುಭವಿ ಡ್ರೈವರ್/ ಸೇಲ್ಸ್ ಮ್ಯಾನ್, ಮತ್ತು ಬೇಕರಿ ಕೌಂಟರ್ ಸೇಲ್ಸ್ ಗರ್ಲ್ ಹಾಗೂ ಅನುಭವಿ ತಿಂಡಿ ಹೆಲ್ಪರ್ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಶೆಣೈ ಬೇಕರಿ7349038077

CADD ಸೆಂಟರ್ ನಿಂದ QUEST 2025 ಕೋರ್ಸ್ ಜೊತೆ ಬಂಪರ್ ಬಹುಮಾನ ಗೆಲ್ಲುವ ಸುವರ್ಣಾವಕಾಶ

MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ. ಟಿಎಂಎ ಪೈ ಫೌಂಡೇಶನ್‌ನ ಘಟಕ)ದ ವತಿಯಿಂದ CADD center Quest 2025 ಸಂಯೋಜನೆಯಲ್ಲಿ Master Futuristic engineering design ಕೋರ್ಸ್ ರಿಜಿಸ್ಟ್ರೇಶನ್ ಗೆ ಆಹ್ವಾನಿಸಲಾಗಿದೆ. ಒಟ್ಟು ಶೇ.40 ರಷ್ಟು ಆಫ್ ಪಡೆದು ಕೋರ್ಸ್ ಜಾಯಿನ್ ಆಗಲು ಇದೊಂದು ಸುವರ್ಣಾವಕಾಶ. ಕೋರ್ಸ್ ಜೊತೆ ಕಾಂಪ್ಲಿಮೆಂಟರಿ ಆಗಿ AR/VR ಕೋರ್ಸ್ ಲಭ್ಯವಿರುತ್ತದೆ.ಇದರೊಂದಿಗೆ ವಾರಾಂತ್ಯದ ಲಕ್ಕಿ ಕೂಪನ್ ಡ್ರಾ ಆಫರ್ ಇದೆ. ಮೊಬೈಲ್ ,ಲ್ಯಾಪ್ ಟಾಪ್ ಗೆಲ್ಲುವ ಬಂಪರ್ ಬಹುಮಾನದ ಅವಕಾಶ ಕೂಡ ಇದೆ. […]