ಭಾರೀ ಮಳೆಯಿಂದ ಹಲವೆಡೆ ಭೂಕುಸಿತ: ಉತ್ತರಾಖಂಡದ ಚಾರ್‌ಧಾಮ್‌ ಯಾತ್ರೆ ಸ್ಥಗಿತ.!

ಲಖನೌ: ನಿರಂತರ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದರಿಂದ ಉತ್ತರಾಖಂಡದ ಚಾರ್‌ಧಾಮ್‌ ಯಾತ್ರೆಯನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ. ಮಾರ್ಗ ಮಧ್ಯದಲ್ಲಿ ಸಿಲುಕಿದ ಯಾತ್ರಾರ್ಥಿಗಳನ್ನು ಕೇಂದ್ರ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್‌) ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ. ಕೇದರನಾಥಕ್ಕೆ ತೆರಳುವ ಹೆದ್ದಾರಿಯ ಸೋನ್‌ಪ್ರಯಾಗ್‌ ಹಾಗೂ ಗೌರಿಕುಂಡದ ಮಧ್ಯೆ ಭೂಕುಸಿತ ಸಂಭವಿಸಿ ರಸ್ತೆಗೆ ಮಣ್ಣು, ಬಂಡೆಗಳು ಬಂದು ಬಿದ್ದಿವೆ. ‘ರಸ್ತೆಯು ಸಂಪೂರ್ಣವಾಗಿ ಮುಚ್ಚಿದ್ದು, ಎಸ್‌ಡಿಆರ್‌ಎಫ್‌ ಸಿಬ್ಬಂದಿ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು. ಬಂಡೆಗಳನ್ನು ತೆರವುಗೊಳಿಸಿದ […]

ಉಡುಪಿ:ಮನೆ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು”ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ […]

ಉಡುಪಿ ಮೀನು ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿರುವ ಉಡುಪಿ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೀನು ಮಾರಾಟಗಾರ ಮಹಿಳೆಯರು ಮೀನು ಮಾರುಕಟ್ಟೆಗೆ ನಗರಸಭೆ ವತಿಯಿಂದ ಕುಡಿಯುವ ನೀರಿನ ಸಂಪರ್ಕ, ಬಾವಿಗೆ ಆವರಣ ಗೋಡೆ ನಿರ್ಮಾಣ, ಮೀನುಗಾರ ಮಹಿಳೆಯರ ಅನುಕೂಲಕ್ಕಾಗಿ ಡ್ರೆಸ್ಸಿಂಗ್ ರೂಮ್, ವಿಶ್ರಾಂತಿ ಕೊಠಡಿ, ಸೋಲಾರ್ ವಿದ್ಯುತ್ ವ್ಯವಸ್ಥೆ, ಭದ್ರತೆಯ ದೃಷ್ಟಿಯಿಂದ ಸಿ ಸಿ ಟಿ ವಿ ಅಳವಡಿಕೆ ಮಾಡುವಂತೆ ಶಾಸಕರಿಗೆ […]

ಉಡುಪಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಜತ ಸಂಭ್ರಮದ ಲಾಂಛನ ಅನಾವರಣ

ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಲಾಂಛನ ಅನಾವರಣಗೊಳಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು, ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯಶಸ್ವಿಯಾಗಿದೆ. ಈಗಾಗಲೇ ಸೊಸೈಟಿ ನಗರದ ಹೃದಯ ಭಾಗದಲ್ಲಿ ಜಾಗವನ್ನು ಖರೀದಿಸಿದ್ದು, […]

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು […]