ಮಲ್ಪೆ: ಹಿಂದೂ ಮುಖಂಡ ಮಂಜು ಕೊಳಗೆ ಚೂರಿ ಇರಿತ ಪ್ರಕರಣ- ಐವರು ಆರೋಪಿಗಳ ಬಂಧನ

ಉಡುಪಿ: ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ವಿವರ:ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸುವ ಸಲುವಾಗಿ ಮಂಜು ಕೊಳ ಅವರನ್ನು ಕರೆದಿದ್ದರು ಎನ್ನಲಾಗಿದೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು […]
ಉಡುಪಿ ಪೂರ್ಣಪ್ರಜ್ಞ ವ್ಯವಸ್ಥಾಪನಾ ಸಂಸ್ಥೆಯಲ್ಲಿ ಬಿ.ಬಿ.ಎ (ಎಲ್ ಅಂಡ್ ಎಸ್ಸಿಎಂ) ಪ್ರವೇಶಾತಿ ಆರಂಭ

ಉಡುಪಿ: ಪವಿತ್ರ ಕ್ಷೇತ್ರ ಉಡುಪಿಯ ಅದಮಾರು ಮಠ ಶಿಕ್ಷಣ ಮಂಡಳಿಯ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ವ್ಯವಸ್ಥಾಪನಾ ಸಂಸ್ಥೆಯು (PIM), 2026ನೇ ಸಾಲಿನ ಬಿ.ಬಿ.ಎ (ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್) ಪದವಿ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆ ಹಾಗೂ ಎಐಸಿಟಿಇ (AICTE) ಅನುಮೋದನೆ ಪಡೆದಿರುವ ಈ ಸಂಸ್ಥೆಯು, ಎನ್.ಎ.ಎ.ಸಿ (NAAC) ಇಂದ ‘ಎ+’ ಶ್ರೇಣಿ ಮಾನ್ಯತೆ ಪಡೆದಿದೆ. ಸಂಸ್ಥಾಪಕರಾದ ಶ್ರೀ ವಿಬುಧೇಶ ತೀರ್ಥ ಶ್ರೀಪಾದರ ದೂರದೃಷ್ಟಿಯಂತೆ, ಇಲ್ಲಿನ ಶಿಕ್ಷಣವು ಭಾರತೀಯ ತತ್ವಾದರ್ಶಗಳು ಮತ್ತು ಆಧುನಿಕ ತಂತ್ರಜ್ಞಾನದ […]
ಉಡುಪಿ:ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಚಿಕ್ಕಮಗಳೂರು ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಗಳಸ್ಥಾಪನೆಗೆ ಸಹಾಯಧನ ಸೌಲಭ್ಯ ಪಡೆಯಲು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರುಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ 18 ರಿಂದ 60 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ಉಡುಪಿ:ಮಹನೀಯರುಗಳ ತತ್ವ, ಆದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು ದಾರ್ಶನಿಕರುಗಳು ಸರಳ ಜೀವನ ನಡೆಸವುದರೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರುಗಳು ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದ್ದಲ್ಲಿ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ […]
ಮಲ್ಪೆ: ಹಿಂದೂ ಮುಖಂಡ ಮಂಜು ಕೊಳಗೆ ಚೂರಿ ಇರಿತ

ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಇಂದು ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿಪಂಚಾಯಿತಿಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ […]