ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ

ಉಡುಪಿ: ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಅಂಗವಾಗಿ ಈದ್ ಮಿಲಾದ್(ಮಿಲಾದುನ್ನಬಿ)ಯನ್ನು ಜಿಲ್ಲೆಯಾದ್ಯಂತ ಶುಕ್ರವಾರ ಆಚರಿಸಲಾಯಿತು. ಶುಕ್ರವಾರ ಮುಂಜಾನೆ ಹೆಚ್ಚಿನ ಮಸೀದಿಗಳಲ್ಲಿ ಮೌಲೂದ್ ಪಾರಾಯಣ, ಪ್ರವಚನಗಳ ಮೂಲಕ ಪ್ರವಾದಿಯವರ ಸಂದೇಶ ವನ್ನು ನೀಡಲಾಯಿತು. ಬೆಳಿಗ್ಗೆ ಮಸೀದಿ, ಮದ್ರಸಾಗಳಲ್ಲಿ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮುಸಲ್ಮಾನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.ಸಿಹಿ ತಿಂಡಿ ಹಂಚಿ, ಪಾನೀಯ ವಿತರಿಸಲಾಯಿತು. ಮಸೀದಿ, ಮದ್ರ ಸಾಗಳಲ್ಲಿ ತುಪ್ಪದೂಟ, ರೊಟ್ಟಿಯೊಂದಿಗೆ ಮಾಂಸದ ಪದಾರ್ಥ ತಯಾರಿಸಿ ಹಂಚಲಾಯಿತು. ಕೆಲವೆಡೆ ಹಿಂದೂ, ಮುಸ್ಲಿಂ, ಕ್ರೈಸ್ತರ […]

ಸೆ. 6, 7 ರಂದು ಉಡುಪಿಯಲ್ಲಿ “ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ”

ಉಡುಪಿ: ಬುಡೋಕಾನ್ ಕರಾಟೆ ಇಂಟರ್ ನ್ಯಾಷನಲ್ ಅಧ್ಯಕ್ಷ ಹಾಗೂ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಅಲೈಡ್ ಆರ್ಟ್ಸ್ ನ ಸಂಸ್ಥಾಪಕ ಹನ್ಸಿ ಪ್ರವೀಣ್ ಕುಮಾರ್ ಅವರ ನೆನಪಿನ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಇದೇ ಸೆ. 6 ಮತ್ತು 7 ರಂದು ಉಡುಪಿಯ ಅಮೃತ್ ಗಾರ್ಡನ್ ಸಭಾಭವನದಲ್ಲಿ ನಡೆಯಲಿದೆ ಎಂದು ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಅಲೈಡ್ ಆರ್ಟ್ಸ್ ಸಂಸ್ಥೆಯ ಉಪ ಮುಖ್ಯಶಿಕ್ಷಕ ಎಂ. ಸುರೇಶ್ ತಿಳಿಸಿದರು‌. ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ […]

ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಸಿಂಚನಾ.

ಕುಂದಾಪುರ: ಸೆಪ್ಟೆಂಬರ್ 04 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕೃತರಾದ ಡಾ. ಗಣೇಶ್ ಗಂಗೊಳ್ಳಿ ಅವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು […]

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘‘ಐಐಎಸ್ ಸಿಖಾಯೇಗ’ ಆರಂಭ

ಬೆಂಗಳೂರು: ಭಾರತದ ಮುಂದಿನ ಒಲಿಂಪಿಕ್‌ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕ್ರೀಡಾಪಟುಗಳು ತಮ್ಮ ಕೈಬೆರಳ ತುದಿಯಲ್ಲಿ ವಿಶ್ವಮಟ್ಟದ ಕ್ರೀಡಾ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ.ಸುಲಭವಾಗಿ ಅರ್ಥವಾಗುವ ಚಿಕ್ಕ-ಚಿಕ್ಕ ವೀಡಿಯೊಗಳ ಮೂಲಕ IIS ನ ತರಬೇತುದಾರರು, ಕೋಚ್‌ಗಳು, ತಜ್ಞರು ಹಾಗೂ ಯುವ ಕ್ರೀಡಾಪಟುಗಳ ಅನುಭವವನ್ನು ಹಂಚಿಕೊಳ್ಳುತ್ತಾರೆ. ಫಿಟ್‍ನೆಸ್‌ನ ಮೂಲಭೂತಗಳಿಂದ […]

ಠಾಣೆಯಲ್ಲಿಲ್ಲ ಸಿಸಿಟಿವಿ: ಪ್ರಕರಣ ದಾಖಲಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ಪೊಲೀಸ್‌ ಠಾಣೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮಾಡದೇ ಇರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪೊಲೀಸ್‌ ವಶದಲ್ಲಿರುವವರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ಗಮನಿಸಿ ನ್ಯಾಯಾಲಯ ಈ ಪ್ರಕರಣ ದಾಖಲಿಸಿದೆ. ಕಳೆದ ಎಂಟು–ಒಂಬತ್ತು ತಿಂಗಳಲ್ಲಿ ಪೊಲೀಸರ ವಶದಲ್ಲಿರುವಾಗಲೇ 11 ಮಂದಿ ಮೃತಪಟ್ಟಿದ್ದಾರೆಂದು ಹಿಂದಿ ಪತ್ರಿಕೆಯೊಂದು ವರದಿ ಮಾಡಿತ್ತು. ಬೆನ್ನಲ್ಲೇ ನ್ಯಾಯಮೂರ್ತಿ ವಿಕ್ರಮ್‌ ನಾಥ್‌ ಹಾಗೂ ನ್ಯಾ.ಸಂದೀಪ್‌ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದೆ. 2020ರ ಡಿಸೆಂಬರ್‌ನಲ್ಲೇ […]