ಉಡುಪಿ:ಮೋಟರೀಕೃತ ದೋಣಿಗಳಿಗೆ ಇಂಜಿನ್ ಖರೀದಿಗೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ:ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರಿಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, […]
ಉಡುಪಿ:ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಆಯೋಜಿಸಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಯಶಸಿಗೊಳಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ […]
ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಮಟ್ಟದ 2025-26ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ:ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಕುಂದಾಪುರ), ವಸುಂಧರ (ಸಹ ಶಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮಾರಬೆಟ್ಟು), ಹರೀಶ್ ಪೂಜಾರಿ (ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಕಾರ್ಕಳ ತಾಲೂಕು), ಸುಮಂಗಲಾ ಗಾಣಿಗ (ಸಹ […]
ಉಡುಪಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅನುಭವ ಇರುವವರು ಹಾಗೂ ಫ್ರೆಶರ್ಸ್ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಊಟದ ವ್ಯವಸ್ಥೆ ಇರುತ್ತದೆ. ಈ ಲಿಂಕ್ ಕ್ಲಿಕ್ ಮಾಡಿ. https://docs.google.com/forms/d/e/1FAIpQLSfwG3XdOT-mGEDIEVmhSL9oisq7stBg5_8BaAHFHgXW_EkZ5Q/viewform?usp=sharing&ouid=105258281570454338826 ಮಾಹಿತಿಗಾಗಿ ಸಂಪರ್ಕಿಸಿ:📞9148975770
ಉಡುಪಿ:ಕರಾಟೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ವಿದ್ಯಾರ್ಥಿಗಳ ಸಾಧನೆ

ಉಡುಪಿ:ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರೀತಿ ಹಾಗೂ ವಿಜ್ಞಾನ ವಿಭಾಗದ ಪಂಚಾಕ್ಷರಿ ಶಾಂತಗೌಡ ರೋಣದ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಹರಿಪ್ರಸಾದ್ ರಾವ್ […]