ಉತ್ತರಾಖಂಡ:ಅಲಕನಂದಾ ನದಿಗೆ ಬಸ್ ಬಿದ್ದು ಓರ್ವ ಮೃತ್ಯು, 10 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಬಸ್‌ವೊಂದು ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದ ಪರಿಣಾಮ ಕನಿಷ್ಠ ಓರ್ವ ಮೃತಪಟ್ಟಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ. ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಪ್ರದೇಶದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 7 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ 18 ಮಂದಿ ಪ್ರಯಾಣಿಕರಿದ್ದರು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ […]
ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ. ಹುದ್ದೆಗಳು: ◼ಶೋರೂಮ್ ಮ್ಯಾನೇಜರ್ ( salary 35k )◼ಅಕೌಂಟೆಂಟ್◼ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (chits) (salary 22k )◼ರೆಸ್ಟೋರೆಂಟ್ ಮ್ಯಾನೇಜರ್ (salary 35k)◼ಆಫೀಸ್ ಎಕ್ಸಿಕ್ಯೂಟಿವ್◼ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಮಾಹಿತಿಗಾಗಿ ಸಂಪರ್ಕಿಸಿ:8050364397, 6361434397
ಜು.1 ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜೂ.25: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಹಿರಿಯ ಪತ್ರಕರ್ತ ಹಾಗೂ ಅಂಕಣ ಕಾರ ರಾಜಾರಾಂ ತಲ್ಲೂರು ‘ಮಾಧ್ಯಮ: ಮುಂದಿನ 10ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್, ಎಲ್‌ಎಲ್‌ಎಂ’ ವಿಷಯದ ಕುರಿತು […]
ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

ಕಾರ್ಕಳ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಥೆಯ ವಿದ್ಯಾರ್ಥಿ ಮೋಹಿತ್ ಎಂ ಅವರು ರಾಷ್ಟ್ರಮಟ್ಟದಲ್ಲಿ 4ನೇ ರ‍್ಯಾಂಕ್ ( ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ್‍ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ […]
ಉಡುಪಿ:ಜೂನ್ 27 ರಂದು ರಕ್ತದಾನ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಜೂನ್ 27 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ […]