ಕಾರ್ಕಳ: ಜೂ.23ರಂದು ರಾಜ್ಯ ಸರಕಾರದ ವಿರುದ್ಧ ಧರಣಿ ಸತ್ಯಾಗ್ರಹ

ಕಾರ್ಕಳ: ರಾಜ್ಯ ಸರಕಾರದ ಜನವಿರೋಧಿ ನಿಲುವು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 380 ಗ್ರಾಮ ಪಂಚಾಯತನ ಮುಂದೆ ಜೂ. 23ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ ಸುನಿಲ್ ಕುಮಾರ್ ಮಾಹಿತಿ ನೀಡಿದರು. ವಿಕಾಸ ಕಚೇರಿಯಲ್ಲಿ ಜೂ.16ರಂದು ನಡೆದ ವಿಕಸಿತ ಭಾರತ ಕಾರ್ಯಾಗಾರದಲ್ಲಿ ಮಾತನಾಡಿ, 9/11 ವಿನ್ಯಾಸ ನಕ್ಷೆ ಪ್ರಾಧಿಕಾರದ ಸಮಸ್ಯೆಯ ಬಗ್ಗೆ ಸರಕಾರ ಇಲ್ಲಿವರೆಗೆ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ಪರಿಣಾಮವಾಗಿ […]

ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ.

ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ. 84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ 10ರಿಂದ 12 ಗಂಟೆ ವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು. ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಮುಖ್ಯಪ್ರಾಣ ಅವರು […]

ಉಡುಪಿ: ಗೋಕಳ್ಳತನ, ಗೋಮಾಂಸ ಸಾಗಾಟ; ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಸಲೀಂ(38) ಬಂಧಿತ ಆರೋಪಿ. ಈತನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಹೀಮ್(35) ಬಂಧಿತ ಆರೋಪಿ. ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ […]

ಬಂಟಕಲ್ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

ಬಂಟಕಲ್: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋಟರ‍್ಯಾಕ್ಟ್ ಘಟಕ ವತಿಯಿಂದ ದಿನಾಂಕ 21 ಜೂನ್ 2025ರಂದು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗದ ಬಗ್ಗೆಉಪನ್ಯಾಸವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಕಾಲೇಜಿನಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾರ್ಕಳದ ಮನಶಾಸ್ತ್ರಜ್ಞ ಮತ್ತುಯೋಗ ತಜ್ಞರಾದ ಡಾ. ಪ್ರಸನ್ನ ಹೆಗ್ಡೆ, ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ಯೋಗವು ನಮ್ಮ ದೈನಂದಿನ ಜೇವನದಲ್ಲಿ ಹೇಗೆ ಮಹತ್ವವನ್ನು ಪಡೆದುಕೊಂಡಿದೆ. ಅದು […]