ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತಂಬಾಕು ಸೇವನೆ ನಿಷೇಧ ಪ್ರತಿಜ್ಞೆ ಮತ್ತು ವಿಶ್ವ ತಂಬಾಕು ರಹಿತ ದಿನಾಚರಣೆ

ಮಣಿಪಾಲ:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಸಿರಾಟದ ಔಷಧ ವಿಭಾಗವು ಮೇ 31, 2025 ರಂದು ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಸೇವನೆ ನಿಷೇಧ ಮತ್ತು ಸಾರ್ವಜನಿಕ ಆರೋಗ್ಯ ವಕಾಲತ್ತುಗೆ ಅದರ ನಿರಂತರ ಬದ್ಧತೆಯನ್ನು ಬಲಪಡಿಸಲು ಗಂಭೀರ ಪ್ರತಿಜ್ಞೆ ಮತ್ತು ಸಾರ್ವಜನಿಕ ಜಾಗೃತಿ ಶಿಕ್ಷಣದೊಂದಿಗೆ ಆಚರಿಸಿತು. ಈ ವರ್ಷದ ಜಾಗತಿಕ ಥೀಮ್ ” ತಂಬಾಕಿನ ಗುಪ್ತ ಸತ್ಯವನ್ನು ಬಹಿರಂಗಪಡಿಸುವುದು. ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮೇಲಿನ ಉದ್ಯಮ ತಂತ್ರಗಳನ್ನು ಬಹಿರಂಗಪಡಿಸುವುದು” ಎಂಬ ವಿಷಯದ ಮೇಲೆ […]
ಉಡುಪಿ:ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ […]
ಮಂಗಳೂರು: ಭೀಕರ ರಸ್ತೆ ಅಪಘಾತ; NSUI ಜಿಲ್ಲಾ ಉಪಾಧ್ಯಕ್ಷ ಸಹಿತ ಇಬ್ಬರು ಮೃತ್ಯು –ಇಬ್ಬರು ಗಂಭೀರ ಗಾಯ

ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.ನಡುರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ […]
ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ಮಧ್ಯಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಸ್ವರೂಪ ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕುಚ್ಚೂರು- ಹೆಬ್ರಿ ರಸ್ತೆ ಸಂಪರ್ಕ ಕಡಿತ; ಇಲಾಖಾಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

ಉಡುಪಿ: ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ರಸ್ತೆ ಮಳೆಗೆ ಕೊಚ್ಚಿಕೊಂಡು ಹೋಗಿದೆ. ಇದಕ್ಕೆ ಅಧಿಕಾರಿಗಳ ಬೇಜಾಬ್ದಾರಿಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಮಾತನಾಡಿ, ಕೊಲ್ಲೂರು ಧರ್ಮಸ್ಥಳ ರಾಜ್ಯ […]