ಉಡುಪಿ:ಯುವಕ ನಾಪತ್ತೆ

ಉಡುಪಿ: ಕಳೆದ 5 ವರ್ಷಗಳಿಂದ ಮಣಿಪಾಲದ ಪಾಪ್ ಅಪ್ ಡೆಕೋರೇಶನ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು, ಉಡುಪಿ ತಾಲೂಕು ಹೆರ್ಗಾ ಗ್ರಾಮದ ಹೈ ಪಾಯಿಂಟ್ ರೆಸಿಡೆನ್ಸಿಯ ಫ್ಲ್ಯಾಟ್ ನಲ್ಲಿ ವಾಸವಿದ್ದ ಸುಭಾಸ್ (25) ಎಂಬಯುವಕನು 2024ರ ನವೆಂಬರ್ 13 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ. ಮೊ.ನಂ:9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ […]
ನೀಟ್ 2025: ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ನಿಖಿಲ್ ಸೊನ್ನದ್‌ಗೆ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು:ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ಹಾಗೂ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಒಟ್ಟು 720 ಅಂಕಗಳಲ್ಲಿ 670 ಅಂಕವನ್ನು ನಿಖಿಲ್ ಪಡೆದು ಈ ಸಾಧನೆ ಮಾಡಿದ್ದಾರೆ.ಇದೇ ರೀತಿ ಕಾಲೇಜಿನ 7 ವಿದ್ಯಾರ್ಥಿಗಳು 625 ಕ್ಕಿಂತ ಅಧಿಕ ಅಂಕವನ್ನು ಪಡೆದರೆ, 19 ವಿದ್ಯಾರ್ಥಿಗಳು 600 […]
ಜೂ.23ರಂದು ದ.ಕ ಮತ್ತು ಉಡುಪಿ ಜಿಲ್ಲೆಯ 399 ಸ್ಥಳಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧರಣಿ.

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಪಂಗಳ ಎದುರು ಜೂ.23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9/11 ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ರಾಜ್ಯ […]
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾಗೆ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು.

ಕಾರ್ಕಳ ಜೂ.16: ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅಕ್ಟೋಬರ್ 25ರಂದು ಅಜೆಕಾರು ಪೊಲೀಸ್ ಠಾಣೆಯ […]
ಭಾರಿ ಮಳೆ ಹಿನ್ನೆಲೆ, ನಾಳೆ (ಜೂನ್ 17) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.