ಉಡುಪಿಯ ಆಶಾ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಆಶಾ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಚಿಲ್ಲರೆ ಕ್ಷೇತ್ರದಲ್ಲಿ 1 ರಿಂದ 2 ವರ್ಷದ ಅನುಭವ ಕಡ್ಡಾಯವಾಗಿ ಇರಬೇಕು. ಬಿಕಾಂ ಪದವಿ ಪಡೆದಿದ್ದು, ಸಾಮಾನ್ಯ ಕಂಪ್ಯೂಟರ್ ಜ್ಞಾನವಿರಬೇಕು. ಆಸಕ್ತರು ನಿಮ್ಮ ನವೀಕರಿಸಿದ ರೆಸ್ಯೂಮ್ ನೊಂದಿಗೆ ಆಧಾರ್ ಕಾರ್ಡ್ ನ ಫೋಟೋ ಕಾಪಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕನಕದಾಸ ರಸ್ತೆ ಉಡುಪಿ-01📩[email protected]📞 +91 6363-914186

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು 2025 ರ ವಿಶ್ವ ರಕ್ತದಾನಿಗಳ ದಿನವನ್ನು ಸ್ವಯಂಪ್ರೇರಿತ ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರ ಅಮೂಲ್ಯ ಕೊಡುಗೆಗಳನ್ನು ಗುರುತಿಸಲು ಮೀಸಲಾಗಿರುವ ವಿಶೇಷ ಕಾರ್ಯಕ್ರಮದೊಂದಿಗೆ ಆಚರಿಸಿತು. ವಾರ್ಷಿಕವಾಗಿ ಜೂನ್ 14 ರಂದು ಆಚರಿಸಲಾಗುವ ಈ ಜಾಗತಿಕ ಉಪಕ್ರಮವು ರಕ್ತದಾನ ಮಾಡುವವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವಾಗ ಸುರಕ್ಷಿತ ರಕ್ತ ಮತ್ತು ರಕ್ತ ಉತ್ಪನ್ನಗಳ ನಿರ್ಣಾಯಕ ಅಗತ್ಯವನ್ನು ಎತ್ತಿ ತೋರಿಸುತ್ತದೆ. ಈ ವರ್ಷದ ಘೋಷವಾಕ್ಯ “ರಕ್ತ ನೀಡಿ, ಭರವಸೆ ನೀಡಿ: ಜೊತೆಯಾಗಿ ಜೀವ ಉಳಿಸೋಣ ” ಎಂಬುದು, ರಕ್ತದಾನದ […]

ಕುಂದಾಪುರ: ವಿದ್ಯಾ ಅಕಾಡೆಮಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಂದಾಪುರ: ವಿಶ್ವ ಪರಿಸರ ದಿನದಂದು ವಿದ್ಯಾ ಅಕಾಡೆಮಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಇದೇ ದಿನ ವಿಶೇಷವಾಗಿ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಶಾಲೆಯ ಮೊದಲ ದಿನವಾಗಿತ್ತು. ಶಾಲೆಯ ಆವರಣ ಹಸಿರು ಹಬ್ಬದಂತೆ ಕಂಗೊಳಿಸುತ್ತಿದ್ದರೆ ಮಕ್ಕಳ ಮುಖಗಳಲ್ಲಿ ಕುತೂಹಲ, ಅಚ್ಚರಿ ,ಅಳುವಿನ ಭಾವನೆಗಳಿದ್ದವು. ಶಿಕ್ಷಕಿಯರು ಶಾಲೆಯ ಪ್ರವೇಶ ದ್ವಾರದಲ್ಲಿ ಸ್ವಾಗತ ಫಲಕಗಳೊಂದಿಗೆ ಮಕ್ಕಳನ್ನ ಆತ್ಮೀಯವಾಗಿ ಬರಮಾಡಿಕೊಂಡರು. ಕೆಲ ಮಕ್ಕಳು ಉತ್ಸಾಹದಿಂದ ನಗುತ್ತಾ ಬಂದರೆ ಕೆಲ ಮಕ್ಕಳು ತಾಯಿಯ ಕೈಬಿಟ್ಟಿದ್ದಕ್ಕೆ ಅಳಲಾರಂಭಿಸಿದರು. ಆ ಭಾವನೆ ತುಂಬಿದ ಕ್ಷಣಗಳಲ್ಲಿ ಶಿಕ್ಷಕರ, ಸಾಂತ್ವಾನ […]

ಉಡುಪಿ: ನಾಳೆ (ಜೂನ್ 16) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಭಾರೀ ಮಳೆ ಹಿನ್ನಲೆ: ನಾಳೆ (ಜೂ16) ದ.ಕ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ರೆಡ್‌ ಅಲರ್ಟ್ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.16ರಂದು (ಸೋಮವಾರ) ‌ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.