ಮೂಡುಬೆಳ್ಳೆ ಶಿಲುಬೆ ಧ್ವಂಸ ಪ್ರಕರಣ; ಆರೋಪಿಗಳ ಬಂಧನಕ್ಕೆ ಭಾರತೀಯ ಕ್ರೈಸ್ತ ಒಕ್ಕೂಟ ಆಗ್ರಹ

ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ. ಈ‌ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ […]

ಮೂಡುಬೆಳ್ಳೆ: ಕಿಡಿಗೇಡಿಗಳಿಂದ ಶಿಲುಬೆ ಧ್ವಂಸ: ಪ್ರಕರಣ ದಾಖಲು

ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಸಿರುವ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 19ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ದ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದ್ದು ಧಾರ್ಮಿಕ ಪವಿತ್ರತೆಗೆ ಒಳಗೊಂಡಿದೆ. ಇದರಿಂದ ಕೃತ್ಯದಿಂದ ತಮಗೆ ಅಘಾತವಾಗಿದ್ದು ಕ್ರೈಸ್ತ ಧರ್ಮಕ್ಕೆ ಅಪಮಾನವಾಗಿದೆ. ಹಾಗೂ ತಮ್ಮ ಸಮುದಾಯದ […]

ಕಾರ್ಕಳ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರ್ಕಳ: ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರ್ಷ ಮೈ ಸುಡಲಿದೆ ವಿಪರೀತ ಬಿಸಿಲು: ಏಪ್ರಿಲ್,ಮೇ ನಲ್ಲೂ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ವರ್ಷವೂ ಕಳೆದ ವರ್ಷಕ್ಕಿಂತ ಹೆಚ್ಚು ಬಿಸಿಲಿರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಶಿಯಸ್‌ ಬಿಸಿಲು ಅಧಿಕವಾಗಿದೆ. ಇದು ಹೀಗೆ ಮುಂದುವರೆದು ಮಾರ್ಚ್ ನಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಮುಟ್ಟಲಿದೆಯಂತೆ. ಇನ್ನು ಬಿಸಿಲಿನ ಜೊತೆ ಪೂರ್ವ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು […]

ದ್ವಿತೀಯ ಪಿಯುಸಿ ಪರೀಕ್ಷೆಗೆ 7 ಲಕ್ಷ ಹಾಗೂ ಎಸೆಸೆಲ್ಸಿ ಪರೀಕ್ಷೆಗೆ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ.

ಬೆಂಗಳೂರು : ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,862 ವಿದ್ಯಾರ್ಥಿಗಳು ಹಾಗೂ ಎಸೆಸೆಲ್ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪರೀಕ್ಷೆಗಳನ್ನು ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾ.1 ರಿಂದ ಮಾ.20ರವರೆಗೆ ಎಸೆಸೆಲ್ಸಿ ಪರೀಕ್ಷೆ-1ನ್ನು ಮಾ.21 ರಿಂದ ಎ.4ರವರೆಗೆ […]