ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ವಿಳಂಬ

ಉಡುಪಿ: ಬ್ರಹ್ಮಾವರದ ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22 ರ ನಡುವಿನ ಅವಧಿಯಲ್ಲಿ ನಡೆದಿರುವ 14 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಫೆ.22ರಂದು ಬೆಳಿಗ್ಗೆ 9.30ರಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗೇಟಿನ ಬಳಿಯಲ್ಲಿ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ನಡೆಸಲು ಉಡುಪಿ ಜಿಲ್ಲಾ ರೈತ ಸಂಘ ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಮಾತನಾಡಿ, ಈ ಧರಣಿ ಸತ್ಯಾಗ್ರಹದಲ್ಲಿ ಪ್ರತಿದಿನ ಕನಿಷ್ಠ 25 ಜನರಂತೆ, […]
ಉಡುಪಿ: ಫೆ.22ರಿಂದ 26ರ ವರೆಗೆ ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮ

ಉಡುಪಿ: ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26 ರವರೆಗೆ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ. ಈ ಬಗ್ಗೆ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಸಂಸ್ಥೆಯ ಪ್ರತಿನಿಧಿ ರಘುರಾಮ್ ಮಾತನಾಡಿ, ಫೆ.22 ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ನಗರಸಭೆ […]
ಲಾರಿ-ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸ್ಥಳದಲ್ಲೇ ಮೃತ್ಯು.

ಲಕ್ನೋ: ಉತ್ತರ ಪ್ರದೇಶದ ಕಾಶಿ ಬಳಿ ಕರ್ನಾಟಕ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಲಾರಿ ಮತ್ತು ಕ್ರೂಸರ್ ನಡುವೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಕೂಡ ಮೃತ ಪಟ್ಟಿದೆ. ಪ್ರಯಾಗ್‌ರಾಜ್ ಕುಂಭಮೇಳಕ್ಕೆ […]
ಕುಂದಾಪುರ: ತೀರ್ಥಯಾತ್ರೆಗೆ ಬಂದ ಬೆಂಗಳೂರಿನ ವ್ಯಕ್ತಿ ಮೃತ್ಯು.

ಉಡುಪಿ: ಸ್ನೇಹಿತನ ಕಾರಿನಲ್ಲಿ ಕರಾವಳಿಯ ದೇವಸ್ಥಾನಗಳಿಗೆ ತೀರ್ಥ ಯಾತ್ರೆಗೆಂದು ಬಂದ ಹಿರಿಯ ವ್ಯಕ್ತಿಯೊಬ್ಬರು ಕುಂಭಾಶಿ ಆನೆಗುಡ್ಡೆಯಲ್ಲಿದ್ದಾಗ ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೇಶವಮೂರ್ತಿ ಎಂದು ಗುರುತಿಸಲಾಗಿದೆ. ಇವರು ಸ್ನೇಹಿತ ಶಿವಣ್ಣರ ಹೊಸ ಕಾರಿಯಲ್ಲಿ ಕರಾವಳಿಗೆ ತೀರ್ಥಯಾತ್ರೆಗೆಂದು ಬಂದಿದ್ದರು.ತೀವ್ರವಾದ ಸಕ್ಕರೆ ಕಾಯಿಲೆ ಹಾಗೂ ಎದೆನೋವಿನಿಂದ ಬಳಲುತಿದ್ದ ಕೇಶವಮೂರ್ತಿ ಅವರು ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿರಬೇಕೆಂದು ಹೇಳಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕೊಲ್ಲೂರು: ತೆಂಗಿನಮರದಿಂದ ತೆಂಗಿನಕಾಯಿ ಕೊಯ್ಯುವಾಗ ತೆಂಗಿನಕಾಯಿ ತಲೆಯ ಮೇಲೆ ಬಿದ್ದ ಪರಿಣಾಮ ಆಯ ತಪ್ಪಿ ಮರದಿಂದ ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟ ಘಟನೆ ಕೊಲ್ಲೂರು ಗ್ರಾಮದ ಹೆಗ್ಗಡೆಹಕ್ಲುವಿನಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಬೈಂದೂರಿನ ಕಾಲ್ತೋಡು ಗ್ರಾಮದ ರಾಮ ಎಂದು ಗುರುತಿಸಲಾಗಿದೆ. ಮಗಳು ಜ್ಯೋತಿ ಮನೆಯಲ್ಲಿ ಕೃಷಿ ಕೆಲಸಕ್ಕೆಂದು ವಾರದ ಹಿಂದೆ ಹೆಗ್ಗಡೆಹಕ್ಲುವಿಗೆ ಬಂದಿದ್ದ ರಾಮ ಅವರು ನಿನ್ನೆ ಸಂಜೆ 4:30ರ ಸುಮಾರಿಗೆ ತೋಟದ ತೆಂಗಿನ ಮರ ಹತ್ತಿ ಕಾಯಿ ಕೊಯ್ಯುವಾಗ ಈ ದುರ್ಘಟನೆ ನಡೆದಿದೆ. […]