ಉಡುಪಿ:ಲಿಂಗ ಅಸಮಾನತೆಯನ್ನು ಹೋಗಲಾಡಿಸುವುದೇ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದ ಉದ್ದೇಶ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು […]

ಕಾರ್ಕಳ: ಕಫದಿಂದ ಮೂರು ತಿಂಗಳ ಮಗು ಮೃತ್ಯು.

ಕಾರ್ಕಳ: ಕಫದ ತೊಂದರೆಯಿಂದ ಮೂರು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಫೆ.14ರಂದು ರಾತ್ರಿ ವೇಳೆ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಎಂಬವರ ಮೂರು ತಿಂಗಳ ಗಂಡು ಮಗು ಧನ್ವಿತ್ ಮೃತ ದುದೈರ್ವಿ. ಕಫದ ತೊಂದರೆ ಉಲ್ಬಣಗೊಂಡು ತೀವ್ರ ಅಸ್ವಸ್ಥಗೊಂಡ ಮಗು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿತು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅನುದಾನ ಒದಗಿಸಿ

ಉಡುಪಿ: ಕರಾವಳಿ ಕಾವಲು ಪಡೆಯ ಬೋಟ್ ಗಳು ಮತ್ತು ವಾಹನಗಳಿಗೆ ಸರಕಾರ ಇಂಧನ ಕಡಿತ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ , ಭದ್ರತೆ ,ಸುರಕ್ಷತೆಯ ವಿಚಾರದಲ್ಲಿ ಸರಕಾರ ರಾಜಿಯಾಗಬಾರದು. ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ.ಅಭಿವೃದ್ಧಿ ಚಟುವಟಿಕೆಗಳಿಗೆ ಮತ್ತು ಮಳೆ ಹಾನಿಗೆ ಯಾವುದಕ್ಕೂ ಅನುದಾನ ಬಂದಿಲ್ಲ.ಕಡಲು ಕೊರೆತಕ್ಕೂ ಸರಕಾರ ಅನುದಾನ […]

ಉಡುಪಿ: ನಾಳೆ (ಫೆ.16) ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗು ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಇಂದು (ಫೆ.16 ) ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಈ ಬಗ್ಗೆ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸುವರು. ವಿಧಾನಸಭಾ ಸ್ಪೀಕರ್ ಯುಟಿ ಖಾದರ್, ಕನ್ನಡ ಮತ್ತು […]

ಕಾರ್ಕಳ: ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ.

ಕಾರ್ಕಳ: ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ಎಎಸ್ ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು ಎಂಬಿಬಿಎಸ್ ಪದವೀಧರೆಯಾಗಿದ್ದು, 2020ರ ಯುಪಿಎಸ್ ಸಿ ಪರೀಕ್ಷೆಯಲ್ಲಿ 165ನೇ ರ್ಯಾಂಕ್ ಪಡೆದಿದ್ದರು. ಪ್ರಸ್ತುತ ಕಾರ್ಕಳ ಡಿವೈಎಸ್ ಪಿ ಅರವಿಂದ ಕಲಗುಜ್ಜಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.