ಜೂನ್ 15ರಂದು ಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮ

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ. ಇದರ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವು ಜೂನ್ 15 ರಂದು ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಸಂಜೆ 5. 30 ಗಂಟೆಗೆ ಜರುಗಲಿದೆ. ಈ […]

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ರಾಣೆಬೆನ್ನೂರು ನಿವಾಸ ಶಂಭುಲಿಂಗ ಮಡಿವಾಳ (37) ಬಂಧಿತ‌ ವ್ಯಕ್ತಿ. ಬುಧವಾರ ಹಳೆಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶಂಭುಲಿಂಗನನ್ನು ಬಂಧಿಸಿದ್ದಾರೆ. ಈತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ […]

ಉಡುಪಿ:ವಿವಿಧ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿನಿಗಮದ ವಿವಿಧ ಯೋಜನೆಗಳಾದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಹೊಲಿಗೆ ಯಂತ್ರ ವಿತರಣೆಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸ ಬಯಸುವ ಹಿಂದುಳಿದ ವರ್ಗಗಳ ಅರ್ಹ […]

ಉಡುಪಿ:ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದಅನುಷ್ಠಾನಗೊಳಿಸಲಾದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ […]

ಉಡುಪಿ:UC ಸಿಟಿಯಲ್ಲಿ 80 Plot ಗಳು ಲಭ್ಯ.

ಉಡುಪಿ:UC ಸಿಟಿಯಲ್ಲಿ 80 Plot ಗಳು ಲಭ್ಯ. ಉಡುಪಿ, ಹಿರಿಯಡಕ: ಯುಸಿ ಸಿಟಟಿಯಲ್ಲಿ 80 Plot ಗಳು ಲಭ್ಯವಿದ್ದು, Plot ನ ದರ 14,80,000 ದಿಂದ ಪ್ರಾರಂಭವಾಗುತ್ತದೆ. ಚೆನ್ನಾಗಿ ಯೋಜಿಸಲಾದ ರಸ್ತೆಗಳಿದ್ದು, ಮೆಸ್ಕಾಂ ಸಂಪರ್ಕ, ಹಾಗೂ ನೀರಿನ ಟ್ಯಾಂಕ್ ಗಳಿವೆ. ಬುಕಿಂಗ್ ಓಪನ್‌: https://www.ucdevelopers.com/[email protected] ಬುಕಿಂಗ್‌ಗಾಗಿ ಸಂಪರ್ಕಿಸಿ: 9900222351 ಪದವಿ ಕಾಲೇಜು ಎದುರು, ಮುಖ್ಯ ರಸ್ತೆ, NH 169 A, ಹಿರಿಯಡ್ಕ.