RCB ಮಾರಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ.

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡಿಯಾಜಿಯೊ ಮಾರಾಟ ಮಾಡುತ್ತಿಲ್ಲ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ ಅಧಿಕೃತವಾಗಿ ತಿಳಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಆರ್‌ಸಿಬಿ ಷೇರನ್ನು ಡಿಯಾಜಿಯೊ ಮಾರಾಟ ಮಾಡಲಿದೆ ಎಂಬ ವದಂತಿ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಇಂದು ಬಾಂಬೆ ಸ್ಟಾಕ್ ಎಕ್ಸ್‌ಚೆಂಜ್ ಈಮೇಲ್ ಮೂಲಕ ಸ್ಪಷ್ಟನೆ ಕೇಳಿತ್ತು. ಈ ಪ್ರಶ್ನೆಗೆ ಉತ್ತರ ನೀಡಿದ ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಸಂಭಾವ್ಯ ಪಾಲು ಮಾರಾಟಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಊಹಾತ್ಮಕ ಸ್ವರೂಪದ್ದಾಗಿವೆ. […]
ಬೆಂಗಳೂರು ಕಾಲ್ತುಳಿತ ಪ್ರಕರಣ: ಹೆಬ್ರಿ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರ ಹಸ್ತಾಂತರ

ಹೆಬ್ರಿ (ಉಡುಪಿ): ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹೆಬ್ರಿಯ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ₹25 ಲಕ್ಷ ನೆರವಿನ ಚೆಕ್ ಅನ್ನು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರು ಹಸ್ತಾಂತರಿಸಿದರು. ‘ನಾವು ಮಗಳನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ನಿರಂತರ. ಇದು ಮರೆಯಲು ಸಾಧ್ಯವಿಲ್ಲದ ದುರ್ಘಟನೆ’ ಎಂದು ಚಿನ್ಮಯಿ ಅವರ ತಂದೆ ಕರುಣಾಕರ ಶೆಟ್ಟಿ ಕಣ್ಣೀರಾದರು. ‘ಮಗಳ ಸಾವಿಗೆ ಪರಿಹಾರವಾಗಿ ಕೇವಲ ಹಣವಲ್ಲ, ನನ್ನ ಮಗನಿಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಕರುಣಾಕರ ಶೆಟ್ಟಿ ಅವರು […]
ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು 11 ವರ್ಷದ ಬಾಲಕಿ ಮೃತ್ಯು.!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದರಿಂದ ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಪೋಷಕರ […]
ಉಡುಪಿ ನಗರದ ಯಾವುದೇ ನಿಲ್ದಾಣಗಳಲ್ಲಿ ಬಾಡಿಗೆ ಮಾಡಲು ಮುಕ್ತ ಅವಕಾಶ

ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿರುವ ಆಯಾ ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ನಗರದ ಯಾವುದೇ ನಿಲ್ದಾಣದ ಆಟೋ ಚಾಲಕರಿಗೆ ಬಾಡಿಗೆ ಮಾಡಲು ಅವಕಾಶ ಕಲ್ಪಿಸಿ ಉಡುಪಿ ನಗರ ನಿಲ್ದಾಣಗಳ ಚಾಲಕರ ಮತ್ತು ಮಾಲಕರ ಒಕ್ಕೂಟ ಒಮ್ಮತದ ನಿರ್ಧಾರ ಕೈಗೊಂಡಿದೆ. ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಉಡುಪಿ ನಗರ ನಿಲ್ದಾಣಗಳ ಚಾಲಕರ ಮತ್ತು ಮಾಲಕರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿ ಈ ಕುರಿತು ತೀರ್ಮಾನ ಕೈಗೊಂಡಿದ್ದಾರೆ. ಈ ಹಿಂದೆ ಕೆಲವೊಂದು ಆಟೋ ಚಾಲಕರ ಮಧ್ಯೆ ನಡೆದ ಗಲಾಟೆಗಳಿಂದ ಎಲ್ಲ […]
ಕುಂದಾಪುರ: ಮೆಡಿಕಲ್ ಶಾಪ್ ಸಿಬ್ಬಂದಿಗೆ ಹಲ್ಲೆ; ಮಹಿಳೆಯ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಮಾವಿನಕಟ್ಟೆಯ ಮೆಡಿಕಲ್ ಶಾಪ್‌ನ ದಲಿತ ಯುವತಿಗೆ ಚಿಲ್ಲರೆ ವಿಚಾರವಾಗಿ ಮುಸ್ಲಿಂ ಮಹಿಳೆಯೋರ್ವಳು ಹಲ್ಲೆಗೈದ ಘಟನೆ ನಡೆದಿದೆ. ಲಕ್ಷ್ಮೀ ಹಲ್ಲೆಗೊಳಗಾದ ಯುವತಿ. ಯಾಸ್ಮಿನ್ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂಪಾಯಿ ನೋಟು ಕೊಟ್ಟಿದ್ದರು. ಆಗ ಯುವತಿ ಚಿಲ್ಲರೆ ಇಲ್ಲ ಪೋನ್ ಪೇ ಮಾಡಿ ಎಂದು ಹೇಳಿದ್ದಳು. ಇದಕ್ಕೆ ಕೋಪಗೊಂಡ ಯಾಸ್ಮಿನ್ ಚಿಲ್ಲರೆ ಕೊಡು ಎಂದು ಜಗಳವಾಡಿ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾಳೆ. ಘಟನೆಯ […]