ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಪೂರ್ವ ಪಾರ್ಥಮಿಕ ವಿದ್ಯಾರ್ಥಿಗಳ ಅಕ್ಷರಾಭ್ಯಾಸ ಕಾರ್ಯಕ್ರಮ.

ಕಿರಿಮಂಜೇಶ್ವರ: ಜೂನ್ 9 ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ಅಕ್ಷರಾಭ್ಯಾಸ ಕಾರ್ಯಕ್ರಮವು ಗಣಪತಿ ಮತ್ತು ಸರಸ್ವತಿ ಆರಾಧನೆ ಹಾಗೂ ನವಗ್ರಹ ಹೋಮದೊಂದಿಗೆ ನೆರವೇರಿತು. ಈ ಕಾರ್ಯಕ್ರಮವು ವೇದಮೂರ್ತಿ ಗಜೇಂದ್ರ ಹೊಳ್ಳ ಅವರ ಅಮೃತ ಹಸ್ತದಿಂದ ದೀಪ ಪ್ರಜ್ವಲನದ ಮುಖೇನ ವಿಜ್ರಂಭಣೆಯಿಂದ ಆರಂಭಗೊಂಡಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು “ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಶಾಸ್ತ್ರೋಕ್ತವಾಗಿ ವಿದ್ಯಾರಂಭ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಆಯೋಜಿಸಲಾಗಿದೆ. ಪೋಷಕರು ತಮ್ಮ ವಿದ್ಯಾರ್ಥಿ […]
ಉಡುಪಿ: ಪೆರ್ಣಂಕಿಲದ ಸೀಮಾ ತೆಂಡೂಲ್ಕರ್ ಭಾರತೀಯ ನೌಕಾಪಡೆಯ ಪೈಲಟ್ ಆಗಿ ಆಯ್ಕೆ.

ಉಡುಪಿ: ಭಾರತೀಯ ನೌಕಾಪಡೆ ಸೇರಬೇಕೆಂಬ ಕನಸು ಕಂಡಿದ್ದ ಉಡುಪಿ ಜಿಲ್ಲೆಯ ಪೆರ್ಣಂಕಿಲ ಅನ್ನೋ ಪುಟ್ಟ ಗ್ರಾಮದ ಹುಡುಗಿ ಸೀಮಾ ತೆಂಡೂಲ್ಕರ್ ಮಾದರಿಯಾಗಿದ್ದಾರೆ. ಎಂಜಿನೀಯರಿಂಗ್ ಪದವಿ ಪಡೆದಿದ್ದರೂ ಭಾರತೀಯ ಶಸಸ್ತ್ರ ಪಡೆಯಲ್ಲಿ ದೇಶ ಸೇವೆ ಮಾಡಲು ಟೊಂಕ ಕಟ್ಟಿದ್ದ ಸೀಮಾ ತೆಂಡೂಲ್ಕರ್ ಇದೀಗ ಭಾರತೀಯ ನೌಕಾಪಡೆಯಲ್ಲಿ ಪೈಲೆಟ್ ಆಗಿ ಆಯ್ಕೆಯಾಗಿದ್ದಾರೆ. ಸದಾನಂದ್ ನಾಯಕ್ ಹಾಗೂ ಜಯಶ್ರಿ ತೆಂಡೂಲ್ಕರ್ ಪುತ್ರಿ ಸೀಮಾ ತೆಂಡೂಲ್ಕರ್ ತಮ್ಮ ಬಾಲ್ಯದ ಕನಸಿನಂತೆ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಪೈಲೆಟ್ ಆಗಿ ಆಯ್ಕೆಯಾಗಿದ್ದಾರೆ.
ಕೋಡಿ ಸೇತುವೆಯ ಬಳಿ ಸ್ಕೂಟರ್, ಚಪ್ಪಲಿ ಬಿಟ್ಟು ಮಹಿಳೆ ನಾಪತ್ತೆ

ಉಡುಪಿ: ಕೋಡಿ ಸೇತುವೆಯ ಬಳಿ ಸ್ಕೂಟರ್ ಚಪ್ಪಲಿ ಬಿಟ್ಟು ವಿವಾಹಿತ ಮಹಿಳೆಯೋರ್ವಳು ನಾಪತ್ತೆಯಾಗಿದ್ದಾರೆ. ಕುಂದಾಪುರ ವಿಠ್ಠಲವಾಡಿ ನಿವಾಸಿ ಹೀನಾ ಕೌಶರ್(33) ನಾಪತ್ತೆಯಾದ ವಿವಾಹಿತೆ. ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಸೇತುವೆ ಬಳಿ ಚಪ್ಪಲಿ ಸ್ಕೂಟರ್ ಪತ್ತೆಯಾಗಿತ್ತು. ನಾಪತ್ತೆಯಾದ ಮಹಿಳೆಯ ಪತಿ ವಿದೇಶದಲ್ಲಿದ್ದು, ಎರಡು ಮಕ್ಕಳು, ತಾಯಿ ಜೊತೆ ವಾಸವಾಗಿದ್ದರು. ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬರುತ್ತಿದ್ದಾಗ ಆತಂಕಗೊಂಡ ಮನೆಯವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸ್ ರು, ಅಗ್ನಿಶಾಮಕ ದಳ ಮತ್ತು […]
ಉಡುಪಿ:ವೃದ್ಧೆ ನಾಪತ್ತೆ

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರದ ಹನೆಹಳ್ಳಿ ಗ್ರಾಮದಲ್ಲಿ ವಾಸವಿದ್ದ ಬಚ್ಚಿಪೂಜಾರ್ತಿ (69) ಎಂಬ ವೃದ್ಧೆಯು 2019 ರಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2561044, ಪಿ.ಎಸ್.ಐಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಬೆಳವಣಿಗೆ ಖಂಡಿಸಿ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಡಿಸಿಗೆ ಮನವಿ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಹಿಂದೂ ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿತು. ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದು ಮನವಿ ನೀಡಲು ಬಂದಾಗಲೂ ಉಡುಪಿ ಡಿಸಿ ಗೈರು ಹಾಜರಾಗಿದ್ದ ಬಗ್ಗೆ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ಕಾರ್ಯಕರ್ತರ ಖಾಸಗಿ ಜೀವನದ ವ್ಯಕ್ತಿತ್ವದ ಗೌರವವನ್ನು, ಘನತೆಯನ್ನು […]