ರಾಜ್ಯದಲ್ಲಿ ಜೂ.11ರಿಂದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ರಾಜ್ಯದಲ್ಲಿ ಮುಂಗಾರು ಸ್ವಲ್ಪಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದು, ಜೂ. 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂ.10ರ ವರೆಗೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ. ಜೂ.11ರಿಂದ ಕರಾವಳಿ ಜಿಲ್ಲೆಗಳ […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ವರ್ಗಾವಣೆ: ಉಡುಪಿ ಯಶ್ಪಾಲ್ ಸುವರ್ಣ ಸ್ವಾಗತ

ಉಡುಪಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯ ತನಿಖೆಯನ್ನು ಎನ್ ಐ ಎ ತನಿಖೆಗೆ ವರ್ಗಾಯಿಸಿದ ಕೇಂದ್ರ ಸರಕಾರದ ಗೃಹ ಇಲಾಖೆಯ ನಿರ್ಧಾರವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿ ಮತಾಂಧ ಶಕ್ತಿಗಳು ಅಮಾನುಷವಾಗಿ ಬಜ್ಪೆ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮಾಡಿ ಕರಾವಳಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೇ ಸವಾಲು ಹಾಕಿದ ಘಟನೆಯ ಬಗ್ಗೆ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷ ಈ ಪ್ರಕರಣವನ್ನು ಎನ್ ಐ ಎ […]
MRPL ನ CSR ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ.

ಮಂಗಳೂರು: ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ಜೂ.5 ರಂದು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ MRPLಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ (CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ ಹಾಗು ಮನಾಸಿಕ ಚಟುವಟಿಕೆಗಳಿಗೆ […]
ಉಡುಪಿ:ನಿವೃತ್ತ ತಹಸೀಲ್ದಾರ್ ಪಿ.ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ

ಉಡುಪಿ:ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದ ಸಂದರ್ಭದಲ್ಲಿ ಮಸ್ಜಿದ್ ಕಮಿಟಿ ವತಿಯಿಂದ ಮಸ್ಜಿದ್ ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಸನ್ಮಾನಿಸಿದರು ಸನ್ಮಾನಿಸಿ ಮಾತನಾಡಿದ ಅವರು ಪಿ ಬಾಬು ರವರು ತಹಸೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದಂತವರು ನಮ್ಮ ಊರಿನವರು ಎಂಬ ಹೆಗ್ಗಳಿಕೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ರಝಕ್ ಕೊಪ್ಪಲ್ ತೋಟ, ರಝಕ್ ಮಲ್ಲಾರು, […]
ಉಡುಪಿ ಮತ್ತು ಮಂಗಳೂರಿನ ಅತಿದೊಡ್ಡ ಎಕ್ಸ್ ಪೋರ್ಟ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ
