ಉಡುಪಿ:ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಅಧಿಕಾರಿಗಳು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಕೆಲಸ ಕಾರ್ಯ ನಿಯಮಿತ ಸರಕಾರಿ ಕಚೇರಿಗಳಿಗೆ ಭೇಟಿ ಮಾಡಿದಸಂದರ್ಭದಲ್ಲಿ ಅವರೊಂದಿಗೆ ಸೌಹಾರ್ದತೆಯೊಂದಿಗೆ ಗೌರವಯುತವಾಗಿ ನಡೆದುಕೊಂಡು, ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಾಂವಿಧಾನಿಕವಾಗಿ ಯಾವುದೇ ಜಾತಿ, ಜನಾಂಗ, ಲಿಂಗ ಆಧಾರದ ಮೇಲೆ ಯಾವುದೇ […]

ಉಡುಪಿ:ಅಂತರ್ಜಲ ವೃದ್ಧಿಗೆ ಮಳೆ ನೀರಿನ ಕೊಯ್ಲು ಆಶಯ- ಇದಕ್ಕೆ ಒತ್ತು ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅವಶ್ಯ.ಸರಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕೆಂದು ಅಧಿಕಾರಿಗಳಿಗೆಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ ಅಂತರ್ಜಲದ ಮಟ್ಟ ನಿರೀಕ್ಷಿತ ಮಟ್ಟಕ್ಕಿಂತ ಕೆಳಭಾಗದಲ್ಲಿದೆ. ಹೆಚ್ಚು ಮಳೆಯಾದರೂನೀರು ಸರಾಗವಾಗಿ ಪಶ್ಚಿಮಾಭಿಮುಖವಾಗಿ ಹರಿದು ಸಮುದ್ರವನ್ನು ಸೇರುತ್ತಿದೆ. […]

ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಮೆಕ್ಯಾನಿಕಲ್ ಕ್ಯಾಡ್ ಇಂಜಿನಿಯರ್, ಮೆಕ್ಯಾನಿಕಲ್ ಕ್ಯಾಡ್ ಬೋಧನಾ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿ ನಡೆಯಲಿದೆ. ಹುದ್ದೆಗಳು: Software Skills: Autocad, Catia , Solidworks ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] 📞8147183603

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ – ದಂಪತಿ ಬಂಧನ

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ದಂಪತಿಯನ್ನು ಉಡುಪಿ ಸೆನ್ ಪೊಲೀಸರು ಜೂ.3ರಂದು ಉಡುಪಿ ಪಿಪಿಸಿ ಕಾಲೇಜು ಸಮೀಪದ ಮನೆಯೊಂದರಿಂದ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಅನಂತ ಪಿ. ಹಾಗೂ ಆತನ ಪತ್ನಿ ವಾಣಿಶ್ರೀ ಬಂಧಿತ ಆರೋಪಿಗಳು. ಇವರಿಂದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ಉಡುಪಿ ಪಿಪಿಸಿ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವೈಬ್‌ಸೈಟ್ ಮೂಲಕ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯಾಟಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ […]

ಮೃತದೇಹ ಹೊತ್ತು ಕಣ್ಣೀರಿಟ್ಟ ಪೊಲೀಸ್ ಸಿಬ್ಬಂದಿಗಳ ತಲೆದಂಡ ಎಷ್ಟು ಸರಿ..??

ಉಡುಪಿ: ಐಪಿಎಲ್ ಟ್ರೋಫಿ ಗೆದ್ದ RCB ತಂಡದ ಆಟಗಾರರು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಕೈಗೊಂಡ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿರುವುದು ವಿಪರ್ಯಾಸ. ಫ್ರ್ಯಾಂಚೈಸಿ ಒಂದರ ಗೆಲುವನ್ನು ತಮ್ಮ ಗೆಲುವೆಂದು ಬಿಂಬಿಸಲು ಹೊರಟ ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಣೆ ಮಾಡಿದ್ದರು. ಆದರೆ ಈಗ ಅದೇ ಪೊಲೀಸ್ ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವುದು ಎಷ್ಟು ಸರಿ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. […]