ಉಡುಪಿ: ಸಮಾಜದಲ್ಲಿ ಶಾಂತಿ ಸ್ಥಾಪಿಸುವಂತೆ ಕಾಂಗ್ರೆಸ್ ನಿಯೋಗ ಎಸ್ಪಿಗೆ ಮನವಿ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಇಂದು ಭೇಟಿಯಾಗಿ ಅಭಿನಂದಿಸಿತು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಶಾಂತಿ ಹಬ್ಬಿಸುವವರ ವಿರುದ್ದ ಯಾವುದೇ ಜಾತಿ ಧರ್ಮ, ಪಕ್ಷ ಎಂಬ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ […]

ಕೊಲ್ಲೂರು: ವ್ಯಕ್ತಿಗೆ ಹಲ್ಲೆ ನಡೆಸಿ, ಕೊಲೆಯತ್ನ- ಇಬ್ಬರ ಬಂಧನ

ಉಡುಪಿ: ಬಸ್ ಇಳಿದು ರಸ್ತೆ ಬದಿಯಲ್ಲಿ‌ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು‌ ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಇಡೂರು-ಕುಂಜ್ಞಾಡಿ ಗ್ರಾಮದ ಕಾರ್ತಿಕ್ ಆಚಾರಿ(24) ಮತ್ತು ವಿಷ್ಣು ಶೆಟ್ಟಿ(26) ಬಂಧಿತ ಆರೋಪಿಗಳು. ಈ ಇಬ್ಬರು ಜೂ.2ರಂದು ರಾತ್ರಿ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ಸುಧೀರ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿದ್ದಾರೆ […]

ಕುಂದಾಪುರ: ಬಸ್ ನಿರ್ವಾಹಕನ‌ ಕೊಲೆಗೆ ಯತ್ನ: ಓರ್ವನ ಬಂಧನ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ. ಆಲೂರು ಗ್ರಾಮದ ಪ್ರದೀಪ್ ಪೂಜಾರಿ(28) ಬಂಧಿತ ಆರೋಪಿ. ಜೂ. 2ರಂದು ಈತ ಹಾಗೂ ಇತರ ಐದು ಮಂದಿ‌ ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್‌ಗೆ ಆಲೂರು ಗ್ರಾಮದ ಹೊಯಿಗೆಹರ ಬಸ್ ನಿಲ್ದಾಣದಲ್ಲಿ ಹತ್ತಿದ್ದಾರೆ. ಬಳಿಕ ನಿರ್ವಾಹಕ ಗಣೇಶ್ ಜೊತೆ ಜಗಳವಾಡಿ, ಅವರ ಶರ್ಟ್ ಕಾಲರ್ ಪಟ್ಟಿಯನ್ನು ಹಿಡಿದು, ಕೈಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಗಣೇಶ್ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರಾಜ್ಯ ಮಟ್ಟದ 22 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಮೇ 31 ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಯಾಗಿ ಶಿಕ್ಷಕರು ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರ ರಾದ ರಾಜೇಂದ್ರ ಭಟ್. ಕೆ. ಪೋಷಕರನ್ನು ಉದ್ದೇಶಿಸಿ, ಪೋಷಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳು ವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಪೊಮ್ಮು (57) ಎಂಬ ವ್ಯಕ್ತಿಯು ಜೂನ್ 2 ರಂದು ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.