ಏಕದಿನ ವಿಶ್ವಕಪ್ ಕರಡು ವೇಳಾಪಟ್ಟಿ ಪ್ರಕಟ ಅಕ್ಟೋಬರ್ 15 ರಂದು ಇಂಡಿಯಾ-ಪಾಕ್​ ಕದನ.. ಗುಜರಾತ್​ ಮೈದಾನ ಸಜ್ಜು

ನವದೆಹಲಿ: “ಬಿಸಿಸಿಐ ಕರಡು ವೇಳಾಪಟ್ಟಿಯನ್ನು ಐಸಿಸಿಯೊಂದಿಗೆ ಹಂಚಿಕೊಂಡಿದೆ, ಮುಂದಿನ ವಾರದ ಆರಂಭದಲ್ಲಿ ಅಂತಿಮ ವೇಳಾಪಟ್ಟಿಯನ್ನು ಹೊರತರುವ ಮೊದಲು ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ” ಎಂದು ಸುದ್ದಿ ಮಾಧ್ಯಮ ಒಂದು ವರದಿ ಮಾಡಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ವೇಳೆ ಭಾರತದಲ್ಲಿ ಈ ವರ್ಷ ಅಂತ್ಯಕ್ಕೆ ನಡೆಯುವ ವಿಶ್ವಕಪ್​ನ ವೇಳಾ ಪಟ್ಟಿ ಪ್ರಕಟ ಆಗಲಿದೆ ಎಂದು ಹೇಳಲಾಗಿತ್ತು.ಭಾರತದಲ್ಲಿ ನಡೆಯುವ ವಿಶ್ವಕಪ್​ಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಆದರೆ ಐಸಿಸಿ ಇನ್ನೂ ವೇಳಾ ಪಟ್ಟಿಯನ್ನು ಪ್ರಕಟಿಸಿಲ್ಲ. […]

ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಭೋಪಾಲ್ (ಮಧ್ಯಪ್ರದೇಶ): ಸರ್ಕಾರಿ ಕಚೇರಿಗಳನ್ನು ಹೊಂದಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ.ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಸಾತ್ಪುರ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಬೆಂಕಿಯು ಕ್ಷಣಾರ್ಧದಲ್ಲಿ ಬಹುದೊಡ್ಡ ರೂಪ ಪಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಆರು ವಾಹನಗಳ ಸಮೇತ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿನ ಆಡಳಿತ ಕಟ್ಟಡವಾದ ಸಾತ್ಪುರ ಭವನದ ಬುಡಕಟ್ಟು ಕಲ್ಯಾಣ […]

ಭೀಮ’ನಾಗಿ ಗೋಪಿಚಂದ್, ಟಾಲಿವುಡ್​ ನಿರ್ದೇಶಕನಾಗಿ ‘ಭಜರಂಗಿ’ ಹರ್ಷ ಎಂಟ್ರಿ.. ‘ಫಿಕ್ಸ್

ತೆಲುಗಿನ ಮ್ಯಾಚೋ ಸ್ಟಾರ್ ಖ್ಯಾತಿಯ ಗೋಪಿಚಂದ್ ಹಾಗೂ ಕನ್ನಡದ ಎ. ಹರ್ಷ ಕಾಂಬೋದ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಗೋಪಿಚಂದ್ ಜನ್ಮದಿನದ ಪ್ರಯುಕ್ತ ಫಸ್ಟ್ ಲುಕ್​ ಹಾಗೂ ಟೈಟಲ್​ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಕನ್ನಡದ ನಿರ್ದೇಶಕ ಎ. ಹರ್ಷ, ಟಾಲಿವುಡ್​ ಸ್ಟಾರ್​ ನಟ ಗೋಪಿಚಂದ್​ ಜೊತೆ ‘ಭೀಮ’ ಸಿನಿಮಾ ಮಾಡಲಿದ್ದಾರೆ. ‘ಭೀಮ’ನಾಗಿ ಮ್ಯಾಚೋ ಸ್ಟಾರ್ ಎಂಟ್ರಿ ಕೊಟ್ಟಿದ್ದು, ಪೊಲೀಸ್ ಖದರ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮುಖದ ಮೇಲೆ ಗಾಯದ ಗುರುತು, ಉಗ್ರ ರೂಪಿಯಾಗಿ ತೀಕ್ಷ ನೋಟದ ಗೋಪಿಚಂದ್ ಹೊಸ […]

ವಸಿಷ್ಠ ಸಿಂಹಗೆ ರವಿಚಂದ್ರನ್​, ಉಪೇಂದ್ರ ಜೊತೆ ಸೇರಿ ‘ಲವ್​ ಲಿ’ ಟೈಟಲ್​ ಸಾಂಗ್​ ರಿಲೀಸ್​​..

. ನಟ ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ವಸಿಷ್ಠ ಸಿಂಹ ನಾಯಕನಾಗಿ ನಟಿಸಿರುವ ‘ಲವ್ ​ಲಿ’ ಚಿತ್ರದ ಟೈಟಲ್​ ಹಾಡನ್ನು ಸ್ಯಾಂಡಲ್​ವುಡ್​ನ ಸ್ಟಾರ್​ ನಟರು ಬಿಡುಗಡೆಗೊಳಿಸಿದ್ದಾರೆ ಚೇತನ್ ಕೇಶವ್ ನಿರ್ದೇಶನದ ಈ ಸಿನಿಮಾದ ಹಾಡನ್ನು ಕ್ರೇಜಿ ಸ್ಟಾರ್​ ರವಿಚಂದ್ರನ್​, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಾಂಕಾ ಉಪೇಂದ್ರ ಹಾಗೂ ಹರಿಪ್ರಿಯಾ ಜೊತೆಯಾಗಿ ಅನಾವರಣಗೊಳಿಸಿದ್ದಾರೆ. ಬಳಿಕ ಚಿತ್ರದ ಬಗ್ಗೆ ಮಾತನಾಡಿದ […]

ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ವಿಧಿವಶ

ರೋಮ್ : ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ಮಿಲಾನ್​ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಏಪ್ರಿಲ್‌ನಲ್ಲಿ ದೀರ್ಘಕಾಲದ ಲ್ಯುಕೇಮಿಯಾ ಪ್ರಕರಣಕ್ಕೆ ಸಂಬಂಧಿಸಿದ ಶ್ವಾಸಕೋಶದ ಸೋಂಕಿಗೆ ಬೆರ್ಲುಸ್ಕೋನಿ ಚಿಕಿತ್ಸೆ ಪಡೆದಿದ್ದಾರೆ ಎಂದು ಇಟಲಿಯ ಮಾಧ್ಯಮ ವರದಿಗಳು ತಿಳಿಸಿವೆ. ಪ್ರಖ್ಯಾತ ಬಿಲಿಯನೇರ್ ಮಾಧ್ಯಮ ಉದ್ಯಮಿ ಬರ್ಲುಸ್ಕೋನಿ 1994 ರಲ್ಲಿ ಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದರು ಮತ್ತು 2011 ರವರೆಗೆ ನಾಲ್ಕು ಬಾರಿ ಪ್ರಧಾನಿಯಾಗಿದ್ದರು. .ಸಿಲ್ವಿಯೊ ಬೆರ್ಲುಸ್ಕೋನಿ ಮಿಲಾನ್​ನಲ್ಲಿ 29 ಸೆಪ್ಟೆಂಬರ್ 1936 ರಂದು […]