ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್ ನಾಯಕ್ 94.23962 ಪರ್ಸೆಂಟೈಲ್, ಚೈತ್ರಾ 93.31371 ಪರ್ಸೆಂಟೈಲ್, ಕೀರ್ತನಾ 91.56991 , ಅಬ್ದುಸ್ ಸಲಾಂ 91.39157, ಭೂಮಿಕಾ 91.05174 ಪರ್ಸೆಂಟೈಲ್ ಪಡೆದಿರುತ್ತಾರೆ. ಉತ್ತಮ ಫಲಿತಾಂಶ […]

ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ ವಾರದೊಳಗೆ ನಿಯಮಾವಳಿ ರಚನೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ, ಮೂಲಭೂತ ಸೌಕರ್ಯ ಹಾಗೂ ಜನರಿಗೆ ಉತ್ತಮ ಸೇವೆ ನೀಡುವ ಕುರಿತು ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ವತಿಯಿಂದ ನಗರಸಭೆ […]

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್’ಗೆ ನಾಯಕನ ಪಟ್ಟ- ಅಧಿಕೃತ ಘೋಷಣೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಟೂರ್ನಿ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ನಡುವೆ ಐಪಿಎಲ್ 2025ರ ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 8ನೇ ಹೊಸ ನಾಯಕನ ಅಧಿಕೃತ ಘೋಷಣೆ ಆಗಿದೆ. ಫಾಫ್ ಡು ಪ್ಲೆಸಿಸ್ ಬಿಡುಗಡೆಯಾದ ನಂತರ ಆರ್‌ಸಿಬಿ ಹೊಸ ನಾಯಕನ ಹುಡುಕಾಟದಲ್ಲಿತ್ತು. ಇದೀಗ ಆರ್‌ಸಿಬಿ ತಂಡಕ್ಕೆ ರಜತ್ ಪಾಟಿದಾರ್ ಹೊಸ ನಾಯಕನ್ನಾಗಿ ನೇಮಕಗೊಂಡಿದ್ದಾರೆ. ರಜತ್ ಪಾಟಿದಾರ್ ಕಳೆದೆರಡು ವರ್ಷಗಳಿಂದ ಆರ್‌ಸಿಬಿ ಪರ […]

MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ವ್ಯಾಲೆಂಟೈನ್ಸ್ ಡೇ’ ಪ್ರಯುಕ್ತ ವಿವಿಧ ಕೋರ್ಸ್ ಗಳಿಗೆ ಶೇ.50 ರಿಯಾಯಿತಿ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್ ನಲ್ಲಿ ಪ್ರೇಮಿಗಳ ದಿನದ ಪ್ರಯುಕ್ತ ವಿವಿಧ ಕೋರ್ಸ್ ಗಳಿಗೆ ವಿಶೇಷ ಕೊಡುಗೆ ನೀಡಲಾಗಿದೆ. ಮೇಕಪ್, ಕೂದಲು, ಚರ್ಮ ಮತ್ತು ಉಗುರುಗಳ ಕೋರ್ಸ್ ಮೇಲೆ ಶೇ.50 ರಿಯಾಯಿತಿ ನೀಡಲಾಗಿದೆ‌. ಈ ಆಫರ್‌ಗಳು ಫೆಬ್ರವರಿ 14 ರಂದು ಮಾತ್ರ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ: ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಪಟ್ಲ ಯುಎಸ್ ನಾಯಕ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಒಂದು ವರ್ಷ ಅವಧಿಯ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವು ಬುಧವಾರ ಮುಕ್ತಾಯಗೊಂಡಿತು. ಓರೇನ್ ಇಂಟರ್ನ್ಯಾಷನಲ್’ನ ಬ್ಯೂಟಿ ಆ್ಯಂಡ್ ವೆಲ್‌ನೆಸ್, ಐಟಿ ಸ್ಕಿಲ್ಸ್, ಡ್ರೋನ್ ಟೆಕ್ನಾಲಜಿ, ಡ್ರೀಮ್ಸ್ ಜೋನ್ ಫ್ಯಾಶನ್ ಡಿಸೈನಿಂಗ್, ಎಲೆಕ್ಟ್ರಿಕ್ ವೆಹಿಕಲ್ & ಆಟೋಮೆಟಿವ್ ಸ್ಕಿಲ್ ವಿಷಯಗಳ ಕುರಿತು ಕಾರ್ಯಾಗಾರ ನಡೆಸಲಾಯಿತು. ಸುಮಾರು 37 ಪಟ್ಲ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಎಲ್ಲರಿಗೂ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಟ್ಲ […]