ಮೇ 19 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಅದ್ವಿತ್ ಐ ಟೆಕ್ ಪ್ರೈ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಕಂಪನಿಗಳ ವತಿಯಿಂದ ಮೇ 19 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ,  ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ […]

ಮಲ್ಪೆ ಬೀಚ್: ಪ್ರವಾಸಿ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ

ಉಡುಪಿ: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ಸ್ ನಿಯಮಗಳ ಅನ್ವಯ ಮೇ 16 ರಿಂದ ಸೆಪ್ಟಂಬರ್ 15 ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಡೆಂಗ್ಯೂ’ ಜ್ವರ ಭೀತಿ: ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹೀಗಾಗಿ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಹೇಳಿದ್ದಾರೆ. ಡೆಂಗ್ಯೂ ಹೆಚ್ಚಾಗಿ ಹರಡುವುದು ಮಳೆಗಾಲದ ಆರಂಭದಲ್ಲಿ, ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಂತಿದ್ದು, ಸೊಳ್ಳೆಗಳು ಮೊಟ್ಟೆ ಇಡಲು ಅನುವು ಮಾಡಿಕೊಟ್ಟಿದೆ. ಇದರಿಂದ ಡೆಂಗ್ಯೂ ಜ್ವರದ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಹೀಗೆ ನಿರಂತರ ಮಳೆಯಾದರೆ ಈ ಸಂಖ್ಯೆ ಇನ್ನಷ್ಟು ಅಧಿಕವಾಗುವ ಸಾಧ್ಯತೆ ಇದೆ. ಡೆಂಗ್ಯೂ ಜ್ವರ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ […]

ನಳಿನ್ ಕುಮಾರ್ ಹಾಗೂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಪ್ರತೀಕಾರ ತೆಗೆದುಕೊಂಡ ಕೆಲಸ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಲಾಗಿದೆ. ಜತೆಗೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾದ ಬಗ್ಗೆ ವರದಿಯಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಸಂಘ ಪರಿವಾರದ ಗಟ್ಟಿ ನೆಲ. ಇಲ್ಲಿ ಬಿಜೆಪಿ ಸಶಕ್ತವಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಾಣಲು ನೀವೇ ಕಾರಣ ಎಂಬ ಒಕ್ಕಣೆಯಿರುವ ಬ್ಯಾನರ್ ಅನ್ನು ಇದೀಗ ಅಳವಡಿಸಲಾಗಿದೆ. ಈ ಮೂಲಕ ಯಾರು […]

ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ವಿ.ಸುನಿಲ್ ಕುಮಾರ್ ಅವರನ್ನು ಜೋಡುರಸ್ತೆಯಲ್ಲಿ ಅದ್ದೂರಿಯ ಸ್ವಾಗತ..

ಕಾರ್ಕಳ: ಕರ್ನಾಟಕ ಚುನಾವಣಾ ಫಲಿತಾಂಶದಲ್ಲಿ ವಿ.ಸುನೀಲ್ ಕುಮಾರ್ ಅವರು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾರ್ಕಳ ಕೇಂದ್ರ ಭಾಗಕ್ಕೆ ಪಾದಸ್ವರ್ಶ ಗೈಯುತ್ತಿದ್ದಂತೆ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಮುಂಭಾಗದಲ್ಲಿ ಕಾರ್ಕಳದ ಜನತೆ ಅವರನ್ನು ಅದ್ದೂರಿಯ ಸ್ವಾಗತ ಮಾಡಲಾಯಿತು. ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಸಂಸ್ಥೆಯ ಪಾಲುದಾರರಾದ ರವಿಪ್ರಕಾಶ್ ಹಾಗೂ ಕಿರಣ ರವಿಪ್ರಕಾಶ್ ಪ್ರಭು ಮತ್ತು ಪ್ರಜ್ವಲ್ ಪ್ರಭು ಇವರು ಆತ್ಮೀಯವಾಗಿ ಶಾಸಕ ಸುನೀಲ್ ಕುಮಾರ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಶುದ್ಧ ರೇಷ್ಮೆ ಶಾಲು ಹೊದಿಸಿ, ಹೂಮಾಲೆಯನ್ನು […]