ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕಿಟೆಕ್ಚರ್ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.8141321 ಪರ್ಸಂಟೈಲ್, ಶ್ರೀಕಾಂತ್ ಎಚ್ 99.6402022 ಪರ್ಸಂಟೈಲ್, ಸೂರ್ಯ ವಿ 96.6726137 ಪರ್ಸಂಟೈಲ್, ಹರ್ಷಿತ್.ಎಸ್.ಎಸ್ 96.0327859 ಪರ್ಸಂಟೈಲ್, ವಿಶಾಲ್ ಎಂ.ವಿ 94.8139797 ಪರ್ಸಂಟೈಲ್, ಸಾಯಿ ಲಿಖಿತ್‌ ರೆಡ್ಡಿ […]

ಪುಣ್ಯಕ್ಷೇತ್ರ ಕೇದಾರನಾಥ ಯಾತ್ರೆಗೆ ಹೆಲಿಕಾಪ್ಟರ್ ಬುಕಿಂಗ್ ಆರಂಭ

ಹಿಂದುಗಳ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಕೇದಾರನಾಥ ಧಾಮ ಒಂದಾಗಿದ್ದು, ಉತ್ತರ ಖಂಡದ ಗುಡ್ಡಗಾಡು ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದೆ. ಕೇದಾರನಾಥಯಾತ್ರೆಗೆ ಐ ಆರ್ ಸಿಟಿಸಿ ಮೂಲಕ ಹೆಲಿಕಾಪ್ಟರ್ ರೈಡ್ ಗೆ ಬುಕಿಂಗ್ ಆರಂಭಗೊಂಡಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಬುಕಿಂಗ್ ಆರಂಭಗೊಂಡಿದೆ. ಮೇ 28 ರಿಂದ ಜೂನ್ 15ರ ನಡುವಿನ ಹೆಲಿಕಾಪ್ಟರ್ ರೈಡನ್ನು ಬುಕ್ ಮಾಡಿಕೊಳ್ಳಬಹುದು. ಬುಕಿಂಗ್ ಗಾಗಿ ವೆಬ್ಸೈಟ್ನಲ್ಲಿ ಲಾಗಿನ್ ಐಡಿ ಅನ್ನು ರಚಿಸಿ, ಲಾಗಿನ್ ಮಾಡಿದ ನಂತರ ಬಳಕೆದಾರರು ಹೆಲಿ ಆಪರೇಟರ್ ಕಂಪನಿಯನ್ನು ಆಯ್ಕೆ ಮಾಡುವ […]

ಟ್ರಕ್‌ನಲ್ಲಿ ಪ್ರಯಾಣಿಸಿ ಚಾಲಕರ ಕಷ್ಟ ಆಲಿಸಿದ ರಾಹುಲ್ ಗಾಂಧಿ

ನವದೆಹಲಿ: ದೆಹಲಿಯಿಂದ ಚಂಡೀಗಢವರಗೆ ಟ್ರಕ್ ನಲ್ಲಿ ಪ್ರಯಾಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು ಅರಿತುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ರಕ್ ಡ್ರೈವರ್ ಗಳೊಂದಿಗೆ ತೆರಳಿ ಅವರ ಕಷ್ಟಗಳನ್ನು ಆಲಿಸಿದರು. ರಾಹುಲ್ ಗಾಂಧಿ ಅವರ ಜತೆ ದೆಹಲಿಯಿಂದ ಚಂಡೀಗಢವರೆಗೂ ಪ್ರಯಾಣಿಸಿದರು. ರಾಹುಲ್ ಗಾಂಧಿ ಟ್ರಕ್ನಲ್ಲಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿವೆ.

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸ’ ಪ್ರಯುಕ್ತ ದೇಗುಲದಲ್ಲಿ ನಡೆದ ವಿವಿಧ ಹೋಮಗಳು

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಮೇ.24 ರಂದು ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಆ ಪ್ರಯುಕ್ತ ದೇಗುಲದಲ್ಲಿ ಮೇ 22ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಭದ್ರಕಾಳಿ ದೇವಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, ಚಂಡಿಕಾ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ 9 ಆವರ್ತನ ಸಪ್ತಶತಿ ಪಾರಾಯಣ, 10,001 ಸಂಖ್ಯೆಯಲ್ಲಿ […]

ಅಧಿಕಾರ ಹಂಚಿಕೆ ಸೂತ್ರವಿಲ್ಲ; ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಂ.ಬಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿಲ್ಲ ಎಂದು ಶನಿವಾರ ಕರ್ನಾಟಕ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಹೇಳಿದ್ದಾರೆ. ತಮ್ಮ ನಡುವೆ ಅಧಿಕಾರ ಹಂಚಿಕೆ ಸೂತ್ರವಿದ್ದರೆ ಹೈಕಮಾಂಡ್ ಘೋಷಣೆ ಮಾಡುತ್ತಿತ್ತು ಎಂದ ಪಾಟೀಲ್, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ ಎಂದರು. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸಲು ಚರ್ಚೆಗಳು ಮತ್ತು ಸಭೆಗಳು ಮುಂದುವರೆದಂತೆ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು […]