ಉಡುಪಿ:ಹವಾಮಾನ ವೈಪರಿತ್ಯಗಳ ನಿರ್ವಹಣಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಪ್ರವಾಹ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾರ್ವಜನಿಕರ ಜೀವನೋಪಾಯ ಮತ್ತು ಆರ್ಥಿಕತೆಯನ್ನು ಬೆಂಬಲಿಸುವ ಅನೇಕ ಉತ್ಪನ್ನಗಳನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ನೈಸರ್ಗಿಕ ಪರಿಸರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಲಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಮತ್ತಿತರ ತಂತ್ರಜ್ಞಾನಗಳ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯು ಪರಿಸರದೊಂದಿಗೆ ಮಾನವನ ಜೀವನಕ್ಕೆ ಹಾನಿಯುಂಟು ಮಾಡುತ್ತಿವೆ. […]

ಉಡುಪಿ:ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಕೇಂದ್ರ ಸರ್ಕಾರದ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳಿಂದ ವೆಬ್‌ಸೈಟ್: https://awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ […]

ಉಡುಪಿ:ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು/ ಉಪನ್ಯಾಸಕರು ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರು / ಉಪನ್ಯಾಸಕರಿಂದ ಈ […]

ಮಲ್ಪೆ: ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ

ಮಲ್ಪೆ: ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಡೆ ಬೇಲಿ ನಿರ್ಮಿಸಲಾಗಿದೆ. ಈ ಮೂಲಕ ಮುಂದಿನ ಮೂರು ತಿಂಗಳು ಪ್ರವಾಸಿಗರು ನೀರಿಗೆ ಇಳಿದು ಮೋಜು, ಮಸ್ತಿ ಮಾಡದಂತೆ ಕ್ರಮ ವಹಿಸಲಾಗಿದೆ. ಪ್ರಸ್ತುತ ಮಲ್ಪೆ ಕಡಲತೀರದಲ್ಲಿ ಅಲೆಗಳ ಅಬ್ಬರ ಬಿರುಸುಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಠಿ ಯಿಂದ ಸಮುದ್ರದ ನೀರಿಗೆ ಇಳಿಯುವುದನ್ನು ನಿಷೇಧಿಸಲಾಗಿದೆ. ಆ ಕಾರಣದಿಂದ ಪ್ರವಾಸಿಗರು ನೀರಿಗೆ ಇಳಿಯುವುದಕ್ಕೆ ಕಡಿವಾಣ ಹಾಕಲು […]

MSDC ಯಲ್ಲಿ “ಫ್ಯಾಷನ್ ಡಿಸೈನ್” ವೃತ್ತಿಪರ ಅಲ್ಪಾವಧಿ ಕೋರ್ಸ್‌.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸ್ಕೂಲ್ ಆಫ್ ಪ್ಯಾಶನ್ ಡಿಸೈನಿಂಗ್ ನಲ್ಲಿ “ಫ್ಯಾಷನ್ ಡಿಸೈನ್” ವೃತ್ತಿಪರ ಅಲ್ಪಾವಧಿಯ ಕೋರ್ಸ್‌ಗಳು ಆರಂಭಗೊಳ್ಳಲಿದೆ. Basic to Advanced: ಹೊಸ ಬ್ಯಾಚ್‌ಗಳು ಜೂನ್ 16, 2025 ರಂದು ಪ್ರಾರಂಭ ಆಗಲಿದೆ. ಡ್ರೀಮ್ ಜೋನ್ 2 ಮಹಡಿ MSDC ಕಟ್ಟಡ, ಈಶ್ವರ್ ನಗರ ಮಣಿಪಾಲ-576104📞91 8123163932📞91 7204592925dreamzone_msdc_manipal