ಕಾರ್ಕಳ: ಹಟ್ಟಿಯಲ್ಲಿ ಅಗ್ನಿ ಅವಘಡ; ಎರಡು ಕಂಬಳದ ಕೋಣಗಳು ಸುಟ್ಟು ಕರಕಲು

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ ತಗುಲಿ ಎರಡು ಕಂಬಳದ ಕೋಣಗಳು ಸುಟ್ಟುಕರಕಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಬೇಲಾಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೇಲಾಡಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿದ್ದು, ಬೆಂಕಿಯ ಕೆನ್ನಾಲೆಗೆ ಸಂಪೂರ್ಣ ಹಟ್ಟಿಗೆ ವ್ಯಾಪಿಸಿದೆ. ಇದರಿಂದ ಅಪ್ಪು ಮತ್ತು ತೋನ್ಸೆ ಹೆಸರಿನ ಎರಡು ಕಂಬಳ ಕೋಣಗಳು ಬೆಂಕಿಗಾಹುತಿಯಾಗಿವೆ.
ಉಡುಪಿ:ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ವೆಬ್‌ಸೈಟ್ https://swdhmis.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ:9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ: 9480843208 ಹಾಗೂ ಕಾರ್ಕಳ […]
ಉಡುಪಿ:ಉಚಿತ ಪರೀಕ್ಷಾ ಪೂರ್ವ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲು ಇಚ್ಛಿಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ https://sevasindhuservices.karnataka.gov.in ಅಥವಾ ಸಹಾಯವಾಣಿ […]
ಉಡುಪಿ:ವಿಕಲಚೇತನರ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿಆನ್‌ಲೈನ್ ಮೂಲಕ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.award.gov.in ಅಥವಾ https://www.depwd.gov.in ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, […]
ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ

ಉಡುಪಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ.ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. […]