ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್’ನಲ್ಲಿ ಪ್ರಾದೇಶಿಕ ಸಮ್ಮೇಳನ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ” ಹೈ ರಿಸ್ಕ್ ಅಂಡ್ ಕ್ರಿಟಿಕಲ್ ಕೇರ್ ಒಬ್ಸೆಟ್ರಿಕ್ಸ್ ” ಕುರಿತು ಪ್ರಾದೇಶಿಕ ಸಮ್ಮೇಳನ ವನ್ನು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ, ಫಾದರ್ ಮುಲ್ಲರ್ ಕಾಲೇಜಿನ ಪ್ರಾಧ್ಯಾಪಕಿಯಾದ ಡಾ. ರೀನಾ ವಿಲ್ಟಾ ಪ್ರಾಂಕ್, ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ, ಮತ್ತು ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]
ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದರು.ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ […]
ಮಂಗಳೂರು:ಇಬ್ಬರು ಮೀನುಗಾರರು ನಾಪತ್ತೆ

ಮಂಗಳೂರು: ನಗರದ ತೋಟ ಬೆಂಗ್ರೆಯ ಅಳಿವೆ ಬಾಗಿಲು ಸಮೀಪ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಭಾರೀ ಗಾಳಿ ಮಳೆಗೆ ದೋಣಿ ಮಗುಚಿ ಬಿತ್ತು ಎನ್ನಲಾಗಿದೆ. ಇದರಿಂದ ದೋಣಿಯಲ್ಲಿದ್ದ ಯಶವಂತ ಮತ್ತು ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ನಾಡ ದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಬಳಿಯ ದಡಕ್ಕೆ ಬಂದು ಬಿದ್ದಿದೆ. ನಾಡದೋಣಿ ಕೂಡ ಕಣ್ಮರೆಯಾಗಿದೆ. ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ.
ಉಡುಪಿಯ ಸ್ವೀಟ್ ಅಂಗಡಿಯಲ್ಲಿ ಕೆಲಸ ಮಾಡಲು ಹುಡುಗಿಯರು ಬೇಕಾಗಿದ್ದಾರೆ

ಉಡುಪಿ: ಉಡುಪಿಯ ಸ್ವೀಟ್ಸ್ ಅಂಗಡಿಗೆ ಸೇಲ್ಸ್ ನಲ್ಲಿ ಕೆಲಸ ಮಾಡಲು ಹುಡುಗಿಯರು ಬೇಕಾಗಿದ್ದಾರೆ. ಊಟ ವಸತಿ ಉಚಿತ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8971588367
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕಿ ಮೃತ್ಯು.

ಉಳ್ಳಾಲ: ಮನೆಯೊಂದರ ತಡೆಗೋಡೆ ಕುಸಿದು ಮನೆ ಮೇಲೆಯೇ ಬಿದ್ದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ನೌಶಾದ್ ಎಂಬವರ ಪುತ್ರಿ ನಯೀಮ(10) ಮೃತಪಟ್ಟ ಬಾಲಕಿ. ನೌಶಾದ್ ಅವರ ಮನೆಯ ಹಿಂಬದಿಯ ಗುಡ್ಡೆ ಹಾಗೂ ತಡೆಗೋಡೆ ಸಂಪೂರ್ಣ ಕುಸಿದು ಮನೆಯ ಮೇಲೆ ಬಿದ್ದಿದೆ. ಈ ಸಂದರ್ಭ ಮನೆಯ ಕೊಠಡಿಯ ಕಿಟಕಿ ನಯೀಮ ಮೇಲೆಯೇ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ […]