ಉಡುಪಿಯ ಸ್ವೀಟ್ ಅಂಗಡಿಯಲ್ಲಿ ಕೆಲಸ ಮಾಡಲು ಹುಡುಗಿಯರು ಬೇಕಾಗಿದ್ದಾರೆ

ಉಡುಪಿ: ಉಡುಪಿಯ ಸ್ವೀಟ್ಸ್ ಅಂಗಡಿಗೆ ಸೇಲ್ಸ್ ನಲ್ಲಿ ಕೆಲಸ ಮಾಡಲು ಹುಡುಗಿಯರು ಬೇಕಾಗಿದ್ದಾರೆ. ಊಟ ವಸತಿ ಉಚಿತ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8971588367

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕಿ ಮೃತ್ಯು.

ಉಳ್ಳಾಲ: ಮನೆಯೊಂದರ ತಡೆಗೋಡೆ ಕುಸಿದು ಮನೆ ಮೇಲೆಯೇ ಬಿದ್ದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ನೌಶಾದ್ ಎಂಬವರ ಪುತ್ರಿ ನಯೀಮ(10) ಮೃತಪಟ್ಟ ಬಾಲಕಿ. ನೌಶಾದ್ ಅವರ ಮನೆಯ ಹಿಂಬದಿಯ ಗುಡ್ಡೆ ಹಾಗೂ ತಡೆಗೋಡೆ ಸಂಪೂರ್ಣ ಕುಸಿದು ಮನೆಯ ಮೇಲೆ ಬಿದ್ದಿದೆ. ಈ ಸಂದರ್ಭ ಮನೆಯ ಕೊಠಡಿಯ ಕಿಟಕಿ ನಯೀಮ ಮೇಲೆಯೇ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ […]

ಮೊಂಟೆಪದವು ಗುಡ್ಡ ಕುಸಿತ ದುರಂತ:ಕುಸಿತಗೊಂಡ ಮನೆಯಡಿಯಲ್ಲಿ ಸಿಲುಕಿರುವ ತಾಯಿ, ಹಾಗೂ ಇಬ್ಬರು ಮಕ್ಕಳು

ಕೊಣಾಜೆ: ಧಾರಾಕಾರ ಮಳೆಗೆ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದರೆ, ಮೂವರು ಕುಸಿದ ಮಣ್ಣು, ಮನೆಯ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಗುಡ್ಡ ಕುಸಿದು ಬಿದ್ದ ತೀವ್ರತೆಗೆ ಮನೆ ಸಂಪೂರ್ಣ ನೆಲಸಮಗೊಂಡಿದ್ದು, ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಸೀತಾರಾಮರ ಪತ್ನಿ ಅಶ್ವಿನಿ ಹಾಗೂ […]

ಉಡುಪಿ:ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ/ಡೆಫ್ ಬ್ಲೈಂಡ್) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ 1,000 ರೂ. ಪ್ರೋತ್ಸಾಹಧನ ನೀಡಲು ಆದೇಶಿಲಾಗಿದ್ದು, ಸದರಿ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಮೇಲ್ಕಂಡ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ ಹೊಂದಿರಬೇಕು […]

ಉಡುಪಿ:ಜಿಲ್ಲೆಯಲ್ಲಿ ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್

ಉಡುಪಿ: ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಮಳೆಹಾನಿ ಬಗ್ಗೆ ಚರ್ಚಿಸಲು […]