ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ವಿವಿಧ ಕೋರ್ಸ್ ಗಳು ಲಭ್ಯ

ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ಎಲ್ಲಾ ರೀತಿಯ ಕಂಪ್ಯೂಟರ್ ನ ವೈಯಕ್ತಿಕ ಕೋರ್ಸ್‌ಗಳು ಲಭ್ಯವಿದ್ದು, ಆಸಕ್ತರು ಇದರ ಸದುಪಯೋಗ ಮಾಡಿಕೊಳ್ಳಬಹುದು. ಕೋರ್ಸ್ ಗಳು:(MS Word, MS Excel, MS PPT, MS-Access, C, C++, VB, Oracle, Java, Photoshop, Tally, HTML) ◼ಕಂಪ್ಯೂಟರ್ ಬೇಸಿಕ್ಸ್-1 ತಿಂಗಳ ಕೋರ್ಸ್.◼ಆಫೀಸ್ ಮ್ಯಾನೇಜ್ಮೆಂಟ್ ನಲ್ಲಿ ಡಿಪ್ಲೊಮಾ. (3 ತಿಂಗಳು)◼ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಡಿಪ್ಲೊಮಾ .(5 ತಿಂಗಳು)◼ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ. (1 ವರ್ಷ)◼ವೆಬ್ ಡಿಸೈನಿಂಗ್‌ನಲ್ಲಿ ಡಿಪ್ಲೊಮಾ.◼ಫ್ಯಾಷನ್ ಡಿಸೈನಿಂಗ್‌ನಲ್ಲಿ ಡಿಪ್ಲೊಮಾ. (1 ವರ್ಷ) ಹೆಚ್ಚಿನ […]

ಇಂದು (ಮೇ 29) ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಮೇ 30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಇಂದು (ಮೇ 29) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ:ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25 ನೇ ಸಾಲಿನಲ್ಲಿಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವನಮೂನೆಯಲ್ಲಿ ಸಂಘದ ಜಿಲ್ಲೆ ಅಥವಾ ತಾಲೂಕು ಅಧ್ಯಕ್ಷರಿಂದ ದೃಢೀಕರಿಸಿ ಆನ್‌ಲೈನ್ ನಲ್ಲಿ ಅಪ್‌ಲೋಡ್ ಮಾಡಬೇಕು. ಅರ್ಜಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಬಿತ್ತಿಪತ್ರ ರಚನಾ ಸ್ಪರ್ಧೆ

ಉಡುಪಿ: ಶ್ರಿ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್ ಘಟಕವು ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ದಿನಾಂಕ 27 ಮೇ 2025 ರಂದು ಬಿತ್ತಿಪತ್ರ ರಚನಾ ಸ್ಪರ್ಧೆಯನ್ನು ಆಯೊಜಿಸಿತ್ತು.ಈ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್ ವಿಭಾಗ, ಎಂಬಿಎ ವಿಭಾಗ ಮತ್ತು ನಿರಾಮಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮವನ್ನು ತಿಳಿಸುವ ಬಿತ್ತಿ ಪತ್ರವನ್ನು ರಚಿಸುವ ಮೂಲಕ ತಂಬಾಕು ರಹಿತ ಜೀವನ ಶೈಲಿಯ ಮಹತ್ವವನ್ನು ತಿಳಿಸಿದರು. ಈ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಹಿಮೇಶ್’ಗೆ ಫುಟ್ಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ.

ಕುಂದಾಪುರ: STAIRS ನ್ಯಾಶನಲ್ ಗೇಮ್ಸ್ – 2025 ಅವರು ನವದೆಹಲಿಯಲ್ಲಿ ದಿನಾಂಕ 19.05.25 ರಿಂದ 22.05.2025 ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.