ಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ: ಬಿ.ರಮನಾಥ ರೈ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ […]

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಹಿಳಾ ಕಲೋತ್ಸವ”

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ ರಿ. ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಲೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು .ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಯಿತು.

1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಂತೆಕಟ್ಟೆ ಕೋಟಿ- ಚೆನ್ನಯ್ಯ ಸರ್ಕಲ್: ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಉಡುಪಿ: ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ ಕೋಟಿ – ಚೆನ್ನಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ರೂ. 1.00 ಕೋಟಿ ವೆಚ್ಚದಲ್ಲಿ ಕೋಟಿ – ಚೆನ್ನಯ್ಯ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 08-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ನೆರವೇರಿಸಿದರು.ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಗೋಪಾಲಪುರ ವಾರ್ಡಿನ ನಗರ ಸಭಾ ಸದಸ್ಯರಾದ ಮಂಜುಳಾ […]

ಜನೌಷಧಿ ಕೇಂದ್ರಗಳ ಮೂಲಕ ಕಡಿಮೆ ಬೆಲೆಯಲ್ಲಿ ಔಷಧ ಪೂರೈಕೆ: ಡಿ.ಹೆಚ್.ಓ

ಉಡುಪಿ: ಸಾರ್ವಜನಿಕರಿಗೆ, ಬಡವರಿಗೆ, ರೈತಾಪಿವರ್ಗದವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನಿರಂತರವಾಗಿ ಕಡಿಮೆ ಬೆಲೆಯಲ್ಲಿ ಔಷಧಿಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಜನೌಷಧಿಯು ಭಾರತ ದೇಶದಲ್ಲಿ ಔಷಧ ಉತ್ಪಾದನೆ ಹಾಗೂ ವಿತರಣೆಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು. ಅವರು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ […]

ದೊಡ್ಡಣ್ಣ ಗುಡ್ಡೆ “ಶ್ರೀ ದುರ್ಗಾಆದಿಶಕ್ತಿ ಕ್ಷೇತ್ರ”ಕಪಿಲ ಗೋ ಮಂದಿರಕ್ಕೆ ಜವಾರಿ ತಳಿಯ ಗೋವುಗಳ ಆಗಮನ

ಉಡುಪಿ :ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಕಪಿಲ ಗೋಮಂದಿರಕ್ಕೆ ಜವಾರಿ ಜಾತಿಯ ಗೋವುಗಳ ಸೇರ್ಪಡೆಯಾಗಿದೆ. ಈಗಾಗಲೇ ಶ್ರೀ ಕ್ಷೇತ್ರದ ಗೋಶಾಲೆಯಲ್ಲಿ ದೇಸಿ ತಳಿಗಳ ವಿವಿಧ ಜಾತಿಗಳ ಗೋವುಗಳನ್ನು ಸಾಕುತ್ತಿದ್ದು ದೇಸಿ ಗೋ ತಳಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗೋಶಾಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ಇದನ್ನು ಮನಗಂಡ ಬಾದಾಮಿ ಜಿಲ್ಲೆಯ ಸಿದ್ದೇಶ್ವರ ದಂಪತಿಗಳು ಶ್ರೀ ಕ್ಷೇತ್ರಕ್ಕೆ ಶ್ವೇತ ವರ್ಣದ ಜವಾರಿತಳಿಯ ದನ ಹಾಗೂ ಕರುವನ್ನು ಕಾಣಿಕೆಯಾಗಿ ನೀಡಿದ್ದಾರೆ. ಕ್ಷೇತ್ರದ ಧರ್ಮದರ್ಶಿ ಶ್ರೀಯುತ […]