ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜ್ಯೋತಿ ಕೃಷ್ಣ ಹೆಬ್ಬಾರ್ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷೆ ಗೀತಾ ವಾಗ್ಳೆ ಅಧಿಕಾರ ಹಸ್ತಾಂತರಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಮಹಿಳಾ ಕಾಂಗ್ರೆಸ್ ಅನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟನೆ ಮಾಡಿದಾಗ ಮಾತ್ರ ಕಾಂಗ್ರೆಸ್ ಮತ್ತೆ […]

ಸಬ್ ಲೆಫ್ಟಿನೆಂಟ್ ಆಸ್ತಾ ಪೂನಿಯಾ ನೌಕಾಪಡೆಯ ಮೊದಲ ಮಹಿಳಾ ಫೈಟರ್ ಪೈಲಟ್.

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೂ ಮಹತ್ವದ ಹುದ್ದೆಗಳಲ್ಲಿ ಅವಕಾಶ ನೀಡಿ ಸಮಾನತೆ ಎತ್ತಿ ಹಿಡಿಯುವ ಸಂಪ್ರದಾಯ ಮುಂದುವರಿದಿದೆ. ಭಾರತೀಯ ನೌಕಾಪಡೆ ಈ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದೆ. ಸಬ್ ಲೆಫ್ಟಿನೆಂಟ್ ಆಸ್ಥಾ ಪೂನಿಯಾ ಫೈಟರ್ ಪೈಲಟ್ ತರಬೇತಿ ಪಡೆದ ನೇವಿಯ ಮೊದಲ ಮಹಿಳೆಯಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ನೇವಿಯಲ್ಲಿ ಯುದ್ಧ ವಿಮಾನ ನಡೆಸುವ ಮಹಿಳಾ ಫೈಟರ್ ಪೈಲಟ್​ಗಳ ಹೊಸ ಯುಗಕ್ಕೆ ನಾಂದಿ ಹಾಡಿದಂತಾಗಿದೆ. ಲೆಫ್ಟಿನೆಂಟ್ ಅತುಲ್ ಕುಮಾರ್ ಧುಲ್ ಮತ್ತು ಸಬ್ ಲೆಫ್ಟಿನೆಂಟ್ (ಎಸ್​ಎಲ್​ಟಿ) ಆಸ್ಥಾ ಪೂನಿಯಾ, ಎಸಿಎನ್​ಎಸ್ […]

ಹೆಬ್ರಿ:ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರಭಾಕರ ದೇವಾಡಿಗ (46) ಎಂಬ ವ್ಯಕ್ತಿಯು ಕೂಲಿ ಕೆಲಸಮಾಡಿಕೊಂಡಿದ್ದು, ಮಧ್ಯಪಾನ ಮಾಡುವ ಚಟ ಹೊಂದಿರುತ್ತಾರೆ. ಈ ಹಿಂದೆ ಸುಮಾರು ಸಲ ಮನೆಯಿಂದ ಕೆಲಸಕ್ಕೆಂದು ಹೋದವರು 2-3 ತಿಂಗಳುಗಳ ಕಾಲ ಮನೆಗೆ ಬಂದಿರುವುದಿಲ್ಲ. ಆದರೆ 2023 ರ ಡಿಸೆಂಬರ್ ಮಾಹೆಯಲ್ಲಿ ಹೋದವರು ಈವರೆಗೂ ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ […]

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್

ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಎನ್‌ಐಎ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ‍ಪ್ರಕರಣದ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. ಕಳೆದೆರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ರಹಿಮಾನ್‌ನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಕತಾರ್‌ನಿಂದ ಬಂದ ಆರೋಪಿಯನ್ನು ಕೇರಳದ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಐಎ ತಂಡ ವಶಕ್ಕೆ ಪಡೆದಿದೆ. ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿತ್ತು. ಈ ಪ್ರಕರಣದ […]