ಉಡುಪಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಸೌತ್ ಶಾಲೆ, ಪಡುನಿಟ್ಟೂರು, ಮೂಳೂರು ಯು.ಬಿ.ಎಂ.ಸಿ, ಅಲೆವೂರು, ಕಂಪನಬೆಟ್ಟು, ಕುತ್ಯಾರು ಪಂಚಾಯತ್ ಬಳಿ, ಪಾಂಗಾಳಗುಡ್ಡೆ ಹಾಗೂ ಮಿತ್ರಬೆಟ್ಟು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ […]

ನಾಡನ್ನು ಸುಭಿಕ್ಷಗೊಳಿಸಲು ಶಕ್ತಿ ಮೀರಿ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಉಡುಪಿ: ನಾಡನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಭಗವಂತನಿಂದ ನಿಷ್ಠೆ ಪ್ರಾಮಾಣಿಕತೆ ಹಾಗೂ ವಿಶ್ವಾಸಕ್ಕೆ ಕುಂದುಬಾರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹಾಗೂ ನಾಡನ್ನು ಸುಭಿಕ್ಷ ಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಇತ್ತರು. ಅವರು ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಗದೇವತೆಗೆ ವಿಶಿಷ್ಟ ಸ್ಥಾನವಿದೆ. ಅತ್ಯಂತ ಸೌಮ್ಯ ಹಾಗೂ ಭಯಂಕರ. ಪೂಜೆ ಮಾಡಿದ್ರೆ ವರ ತೊಂದರೆ ಕೊಟ್ಟರೆ ಪ್ರಾಣ ತೆಗೆಯುವ ಶಕ್ತಿ ಇದೆ. ಇದರ […]

ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಕೊಡಿ: ಸಿಎಂಗೆ ಡಾ.ಪಿ.ವಿ.ಭಂಡಾರಿ ಮನವಿ ಸಲ್ಲಿಕೆ

ಮಣಿಪಾಲ: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಬೇಕು ಎಂಬುದು ಬಹುದಿನಗಳ ಬೇಡಿಕೆ. ಈ ನಿಟ್ಟಿನಲ್ಲಿ ಕರಾವಳಿ ಯೂತ್ ಕ್ಲಬ್ ಖ್ಯಾತ ಮನೋವೈದ್ಯ ಡಾ. ಪಿ.ವಿ ಭಂಡಾರಿ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದೆ. ಇವತ್ತು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭೇಟಿಯಾದ ಡಾ. ಪಿ ವಿ ಭಂಡಾರಿ ನೇತೃತ್ವದ ತಂಡವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆ ಮಾಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪಿಪಿಪಿ ಮಾದರಿಯ ಮೆಡಿಕಲ್ ಕಾಲೇಜಿಗೆ ಒಲವು ತೋರಿದ್ದಾರೆ. ಸರಕಾರಿ ಮೆಡಿಕಲ್ […]

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ

ಉಡುಪಿ ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ದೇವರ ಆಶೀರ್ವಾದ ಪಡೆದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಪೂರ್ಣಕುಂಭದೊಂದಿಗೆ ಸಿಎಂರನ್ನು ಸ್ವಾಗತಿಸಲಾಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಶಾಸಕರಾದ ಲಾಲಾಜಿ ಮೆಂಡನ್, ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿಜೆಪಿ […]

ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ […]