ಜೂ.25: ಕುಂದಾಪುರದಲ್ಲಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್.ಯು.ಎಲ್.ಎಮ್/ ಎನ್.ಆರ್.ಎಲ್.ಎಮ್, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 9.30 ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, […]

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ https://ssp.postmatric.karnataka.gov.in  ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public, ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 […]

ತಮಿಳುನಾಡಿನಲ್ಲಿ ಇಂಧನ ಬೆಲೆ ವಿರುದ್ದ ಪ್ರತಿಭಟನೆ: ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ದ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡಿನ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಅನುಮತಿ ಪಡೆಯದೆ ರಾಜ್ಯ ಸಚಿವಾಲಯದತ್ತ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ರಾಜು ಬಿಜೆಪಿ ಒತ್ತಾಯಿಸುತ್ತಿದೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 31 ರಂದು ಅಣ್ಣಾಮಲೈ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾ ರಾಜ್ಯದ […]

ಸಂಗೀತ ಪ್ರದರ್ಶನ ನೀಡುತ್ತಲೇ ಪ್ರಾಣ ತ್ಯಜಿಸಿದ ಖ್ಯಾತ ಗಾಯಕ ಕೆ.ಕೆ

ಕೋಲ್ಕತ್ತಾ: ಗಾಯಕ-ಸಂಯೋಜಕ ಕೆಕೆ (ಕೃಷ್ಣಕುಮಾರ್ ಕುನ್ನತ್) ಮಂಗಳವಾರ ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಎರಡು ದಿನಗಳ ಸಂಗೀತ ಕಚೇರಿಗಾಗಿ ಕೋಲ್ಕತ್ತಾದಲ್ಲಿದ್ದರು. ಇಲ್ಲಿನ ನಜ್ರುಲ್ ಮಂಚದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ ಕೆ.ಕೆ ಅವರನ್ನು ಸಿ ಎಂ ಆರ್ ಐ ಆಸ್ಪತ್ರೆಗೆ ಸಾಗಿಸಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆತರುವಾಗಲೆ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಅವರು ಶಂಕಿತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸಿಎಂಆರ್‌ಐ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ […]

ಒಂದು ಕಾಲದಲ್ಲಿ ಪರಿತ್ಯಕ್ತ ನಾಯಿಮರಿ: ಈಗ ‘ಜಗತ್ತನ್ನೇ ಸುತ್ತಿದ ಮೊದಲ ನಾಯಿ’! ಇದು ಒಂದು ನಾಯಿಯ ಕಥೆ

ನಾಯಿಮರಿಯಾಗಿದ್ದಾಗ ಪರಿತ್ಯಕ್ತಳಾಗಿದ್ದ ಸವನ್ನಾ ಎನ್ನುವ ನಾಯಿಯೊಂದು ಇವತ್ತು ಜಗತ್ತನ್ನೇ ಸುತ್ತಿದ ಮೊದಲ ನಾಯಿ ಎನ್ನುವ ಬಿರುದಿಗೆ ಪಾತ್ರವಾಗಿದೆ. ಈ ನಾಯಿಯ ಚಿತ್ರಗಳನ್ನು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಲಾಗಿದ್ದು, ಜಗತ್ತಿನಾದ್ಯಂತದ ಶ್ವಾನ ಪ್ರೇಮಿಗಳು ಆನಂದತುಂದಿಲರಾಗಿದ್ದಾರೆ. ಟ್ವಿಟರ್ ಹ್ಯಾಂಡಲ್ ವೀ ರೇಟ್ ಡಾಗ್ಸ್ ತನ್ನ ಇತ್ತೀಚಿನ ಪೋಸ್ಟ್‌ನಲ್ಲಿ ಈ ನಾಯಿಯ ಬಗ್ಗೆ ಪೋಸ್ಟ್ ಮಾಡಿದೆ. ಇದು ಸವನ್ನಾ. ಈಕೆ ಅಧಿಕೃತವಾಗಿ ಭೂಗೋಳವನ್ನು ಸುತ್ತಿದ ಮೊದಲ ನಾಯಿ. ಅವಳು ನಾಯಿಮರಿಯಾಗಿ ಪರಿತ್ಯಕ್ತಳಾಗಿದ್ದಳು, ಈಗ ತನ್ನ ಮಾನವ ಜೊತೆಗಾರ ಟಾಮ್‌ನೊಂದಿಗೆ ಇಡೀ ಜಗತ್ತನ್ನು […]