ತರಬೇತಿಯಲ್ಲಿ ಶಿಕ್ಷಕರ ಬದ್ಧತೆ ಶ್ಲಾಘನೀಯ: ಡಾ. ಅಶೋಕ ಕಾಮತ್

ಉಡುಪಿ: ಶಿಕ್ಷಕರು ನಿರಂತರ ಕಲಿಕಾದಾರರು. ಆನ್‌ಲೈನ್ ಮೂಲಕ ಶಾಲಾ ಅವಧಿಯ ಬಳಿಕ ನಡೆಸಿದ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಶಿಕ್ಷಕರ ಬದ್ಧತೆಯು ಶ್ಲಾಘನೀಯ ಎಂದು ಉಡುಪಿ ಡಯಟ್‌ನ ಉಪಪ್ರಾಂಶುಪಾಲ ಡಾ. ಅಶೋಕ ಕಾಮತ್ ತಿಳಿಸಿದರು. ಅವರು ಇಂದು ಉಡುಪಿ ಡಯಟ್ ಇಲ್ಲಿ ಶ್ರೀ ಅರಬಿಂದೋ ಸೊಸೈಟಿ ವತಿಯಿಂದ ಆನ್‌ಲೈನ್ ಮೂಲಕ ನಡೆದ ತರಬೇತಿಗಳ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತರಬೇತುದಾರ ವಿನಯ್ ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿ ಪಡೆದ ಶಾಲೆಗಳನ್ನು ರೋಲ್ ಮಾಡೆಲ್ ಶಾಲೆಗಳಾಗಿ ಗುರುತಿಸಿ ಬ್ಯಾನರ್‌ಗಳನ್ನು […]

ಫೈಲ್, ಪೇಪರ್ ಬ್ಯಾಗ್ ಮೇಕಿಂಗ್ ತರಬೇತಿ ಸಮಾರೋಪ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ತಾಲೂಕು ಪಂಚಾಯತ್ ಬ್ರಹ್ಮಾವರ, ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಹಾಗೂ ಪಾಂಡೇಶ್ವರ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ನೇಹ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಿಳೆಯರಿಗೆ ಫೈಲ್ ಮೇಕಿಂಗ್ ಮತ್ತು ಪೇಪರ್ ಬ್ಯಾಗ್ ಮೇಕಿಂಗ್ ತರಬೇತಿಯ ಸಮಾರೋಪ ಸಮಾರಂಭವು ಇಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ ಸಿಲ್ವಾ ಮಾತನಾಡಿ, ಸಂಜೀವಿನಿ ಮಹಿಳೆಯರು ಇಂತಹ ತರಬೇತಿ ಪಡೆದು ಒಗ್ಗಟ್ಟಾಗಿ […]

ಮಾ.18: ಜಿಲ್ಲೆಯಲ್ಲಿ ಕೇಂದ್ರ ಸಚಿವರ ಪ್ರವಾಸ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾರ್ಚ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮೂಡಿಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.

ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಯಿತು: ಬಿ. ಸದಾಶಿವ ಪ್ರಭು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ 2.5 ವರ್ಷಗಳ ಅವಧಿಯಲ್ಲಿ ಕಂದಾಯ, ಜಿಲ್ಲಾ ಪಂಚಾಯತ್, ಪೌರಾಡಳಿತ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉತ್ತಮವಾದ ಸಹಕಾರವನ್ನು ನೀಡಿದ್ದು, ಇದರಿಂದಾಗಿಯೇ ಜಿಲ್ಲೆಯಲ್ಲಿ ಹಲವು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು ಎಂದು ಉಡುಪಿಯಿಂದ ವರ್ಗಾವಣೆಗೊಂಡಿರುವ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕೋವಿಡ್-19 ಅವಧಿಯಲ್ಲಿ, ಕ್ವಾರಂಟೈನ್ ಕೇಂದ್ರಗಳು ಮತ್ತು ಕೋವಿಡ್ ಕೇರ್‌ಸೆಂಟರ್‌ಗಳ ನಿರ್ವಹಣೆಯು ಸವಾಲಿನ […]