ಕಾರ್ಕಳ: ಓಮ್ನಿ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾರ್ಕಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ದುರ್ಗಾ ಆರ್ಟ್ಸ ಬಳಿ ನಡೆದಿದೆ. ಕರಿಯಶೆಟ್ಟಿ (೬೯) ಮೃತಪಟ್ಟವರು. ಕರಿಯಶೆಟ್ಟಿಯವರು ಜೋಡುರಸ್ತೆ ಕಡೆಯಿಂದ ಹಿರ್ಗಾನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಓಮ್ನಿಯಲ್ಲಿ ಬರುತಿದ್ದ ಚಾಲಕ ಅನಿಲ್ ಎಂಬಾತ ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಕರಿಯಶೆಟ್ಟಿ ತೀವ್ರ ತರಹದ ತಲೆಯ ಹಿಂಬದಿ ಮತ್ತು ಸೊಂಟಕ್ಕೆ […]

ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಗೋಷಣೆ

ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ . ಸಮಿತಿ ಗೌರವಾಧ್ಯಕ್ಷ ಕೆ ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಶನಿವಾರ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ‌ ಕೈಗೊಳ್ಳಲಾಗಿದೆ . ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ […]

ಹೆಬ್ರಿ: ಶಿವಪುರ ಕೆರೆಬೆಟ್ಟು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೆಬ್ರಿ: ಶಿವಪುರ ಕೆರೆಬೆಟ್ಟು ಎಂಬಲ್ಲಿನ ಯುವಕ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ರವಿವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಪುರ ಕೆರೆಬೆಟ್ಟು ನಿವಾಸಿ ಸತೀಶ ಶೆಟ್ಟಿ, ಮಮತಾ ಶೆಟ್ಟಿ ದಂಪತಿಯ ಪುತ್ರ ಹೆಬ್ರಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೆ ತರಗತಿಯ ಅನ್ವಿತ್ ಶೆಟ್ಟಿ  (14) ರವಿವಾರ ಬೆಳಿಗ್ಗೆ ತನ್ನ ಮನೆಯ ಬಾತ್ ರೂಮಿನಲ್ಲಿರುವ ಕಬ್ಬಿಣದ ರಾಡ್ ಗೆ ಚೂಡಿದಾರದ ವೇಲ್ ಅನ್ನು ಕಟ್ಟಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮನೆಯ […]

ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತ

ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಬಂದಲ್ಪಾಡಿ ಎಂಬಲ್ಲಿ ನಡೆದಿದೆ. ಉಮೇಶ್ (೫೦) ಎಂಬುವವರು ಮೃತಪಟ್ಟವರು. ಅಸ್ತಮ ಹಾಗು ಫಿಟ್ಸ್ ಕಾಯಿಲೆಯಿಂದ ಬಳಲುತಿದ್ದ ಉಮೇಶ್‌ರವರು ಜ.೧೫ ರಂದು ಹತ್ತಿರದ ಬಂಡಸಾಲೆಯ ತೋಟದ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಶೌಚಕ್ಕೆ ಹೋಗಿದ್ದಾಗ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜು; ಸಮಾಜ ವಿಜ್ಞಾನಗಳ ಸಂಘದ ಚಟುವಟಿಕೆಗಳ ಉದ್ಘಾಟನೆ

ಉಡುಪಿ: ಸಮಾಜ ವಿಜ್ಞಾನಗಳು ಮೌಲ್ಯಾಧರಿತ ಜ್ಞಾನವನ್ನು ನೀಡುವುದರ ಜೊತೆಗೆ ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕರಿಸುತ್ತದೆ ಎಂದು ಮುಲ್ಕಿ ವಿಜಯ ಕಾಲೇಜಿನ ಪ್ರಾಂಶುಪಾಲೆ ಡಾ. ಶ್ರೀಮಣಿ ಹೇಳಿದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಮಾಜ ವಿಜ್ಞಾನ ಸಂಘದ 2021-22ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಸಮಾಜದಲ್ಲಿ ಸಮಾಜ ವಿಜ್ನಾನಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ ಮಾತನಾಡಿ, ಸಮಾಜ ವಿಜ್ಞಾನಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ […]