ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳು ಲಭ್ಯವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.   ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಆಹಾರ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸಿದ್ಧ ಆಹಾರ ಉದ್ದಿಮೆಗಳನ್ನು ಪ್ರಾರಂಭಿಸುವ ಮುನ್ನ ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಿಂದ ತಪ್ಪದೇ […]

ಕಾಪು ಪುರಸಭೆ ಚುನಾವಣೆ: ಮದ್ಯ ಮಾರಾಟ, ಸಂತೆ, ಜಾತ್ರೆ ನಿಷೇಧ

ಉಡುಪಿ: ಕಾಪು ಪುರಸಭಾ ಚುನಾವಣೆಗೆ ಸಂಬಂಧಿಸಿದಂತೆ ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ರಾಜ್ಯ ಅಬಕಾರಿ ಕಾಯ್ದೆ ಅನ್ವಯ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ […]

ಉಡುಪಿ: ಕಾಂಗ್ರೆಸ್ ಮುಖಂಡ ಜನಾರ್ದನ ಭಂಡಾರ್ಕರ್ ನಿಧನ

ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಭಂಡಾರ್ಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಇವರು ಎರಡು ಅವಧಿಗೆ ಉಡುಪಿ ನಗರಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ

ಉಡುಪಿ: ಯುವತಿ ನಾಪತ್ತೆ

ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ. ಮೂಡನಿಡಂಬೂರು ಗ್ರಾಮದ ನಿವಾಸಿ ಸಹನಾ (24) ನಾಪತ್ತೆಯಾಗಿರುವ ಯುವತಿ. ಈಕೆ ಡಿಸೆಂಬರ್ 23 ರಂದು ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ […]

ಬ್ರಹ್ಮಾವರ: ತಾಯಿ- ಮಗು ನಾಪತ್ತೆ

ಬ್ರಹ್ಮಾವರ: ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್ ಹಾಗೂ ಅವರ ಮಗ ಆರು ವರ್ಷದ ಮನೀಶಾ ನಾಪತ್ತೆಯಾಗಿದ್ದಾರೆ. ಮಾರುತಿ ದಂಪತಿ ಕಳೆದ 6 ತಿಂಗಳಿನಿಂದ ಹಾರಾಡಿ ಗ್ರಾಮದ “ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ವರ್ಷದ ನವೆಂಬರ್ 9 ರಂದು ಮಾರುತಿ ಅವರು ತರಕಾರಿ ವ್ಯಾಪಾರದ […]