ಕುಂದಾಪುರ:ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ವಿಭಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಕುಂದಾಪುರ : ಡಿಸೆಂಬರ್ 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಬ್ರಹ್ಮಾವರದಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ
ಬ್ರಹ್ಮಾವರ: ಬ್ರಹ್ಮಾವರದಲ್ಲಿ ತಿಂಡಿ ತಯಾರಿಕಾ ಘಟಕಕ್ಕೆ ಸಂಜೆ 6ರಿಂದ ರಾತ್ರಿ 2.30 ರ ತನಕರಾತ್ರಿ ಶಿಫ್ಟ್ ಕೆಲಸ ಮಾಡಲು ಯುವಕರು ಬೇಕಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7349038077
ಉಡುಪಿ:ವಿವಿಧ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ:’ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಇಂದು ಚಾಲನೆ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ 24*7ರಂತೆ ಒದಗಿಸಲಾಗುತ್ತಿದೆ. ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಇಂದು ನಗರದ […]
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ
ಉಡುಪಿ: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ […]