ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹ; ರಾ.ಹೆ. 66 ತಡೆದು ರೈತರಿಂದ ಪ್ರತಿಭಟನೆ

ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹ; ರಾ.ಹೆ. 66 ತಡೆದು ರೈತರಿಂದ ಪ್ರತಿಭಟನೆ ಹೆದ್ದಾರಿಯಲ್ಲೇ ಹಡಿಮಂಚವನ್ನಿಟ್ಟು ಭತ್ತದ ತೆನೆಯನ್ನು ಬಡಿಯುವ ಮೂಲಕ ಪ್ರತಿಭಟಿಸಿದ ರೈತರು ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಜನಪರ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಇಂದು ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ರೈತರು ಹೋರಾಟಗಾರರು ಹೆದ್ದಾರಿಯಲ್ಲೇ ಹಡಿಮಂಚವನ್ನಿಟ್ಟು ಭತ್ತದ ತೆನೆಯನ್ನು ಬಡಿಯುವ ಮೂಲಕ ಆಕ್ರೋಶ ಹೊರಹಾಕಿದರು. […]

ಮಹಾರಾಷ್ಟ್ರದ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಮೃತ್ಯು

ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ “ಗೋ ದಾನ”: ಬಡವರಿಗೆ ಆರ್ಥಿಕ‌ ಶಕ್ತಿ ತುಂಬುವ ನಿಟ್ಟಿನಲ್ಲಿ ವಿನೂತನ ಹೆಜ್ಜೆ

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಬಜಗೋಳಿಯಲ್ಲಿ ನಡೆಯಿತು. ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು. ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರು ತಮ್ಮ ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ […]

ಕಾಪು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಕಾಪು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಅವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ […]

ಉಡುಪಿ: ಸುಧೀಂದ್ರ ಗೋಲ್ಡ್ ಫೈನಾನ್ಸ್ ನ ನೂತನ ಶಾಖೆ ಉದ್ಘಾಟನೆ

ಉಡುಪಿ: ಕಳೆದ 27 ವರ್ಷಗಳಿಂದ ಜನರ ಸೇವೆಯಲ್ಲಿರುವ ಪ್ರಸಿದ್ಧ ಸುಧೀಂದ್ರ ಗೋಲ್ಡ್ ಫೈನಾನ್ಸ್ ನ ನೂತನ ಶಾಖೆ ಉಡುಪಿ ಗೀತಾಂಜಲಿ ಸಿಲ್ಕ್ ರೋಡ್ ಸಾಯಿರಾಧಾ ಟಿವಿಎಸ್ ಶೋರೂಮ್ ಹತ್ತಿರದ opale enclave ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರಿನ ಸಿವಿಲ್ ಕೋರ್ಟ್ ನ್ಯಾಯಮೂರ್ತಿ ಮಧುಕರ್ ಭಾಗವತ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಹಕರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ವ್ಯವಹಾರ ಮಾಡುವಂತೆ ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಂಡವಿ ಡೆವಲಪರ್ಸ್ ನ jason dias, ಸಿಂಡಿಕೇಟ್ ಬ್ಯಾಂಕ್ ನ […]