ಜೈನ ಧರ್ಮಿಯರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದಿಂದ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ.ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಕರ್ನಾಟಕ ಸಮಸ್ತ ಜೈನ ಸಮಾಜದ ವತಿಯಿಂದ ಸೋಮವಾರ ನಡೆದ ಜೈನ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಭಾರತದ ಸಂವಿಧಾನ ತುಂಬಾ ಶ್ರೇಷ್ಠವಾದದ್ದು, ಇಲ್ಲಿ ಆಚಾರ ವಿಚಾರಗಳಿಗೆ ತುಂಬಾ ಸ್ವಾತಂತ್ರ್ಯವಿದೆ. ಅಲ್ಪ ಸಂಖ್ಯಾತ ಕೋಟಾದಲ್ಲಿ ಜೈನ ಧರ್ಮಿಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. […]

ಸುಳ್ಯ: ಕುಸಿದು ಬಿದ್ದು ವ್ಯಕ್ತಿ ಮೃತ್ಯು.

ಮಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಅರಣ್ಯ ತಪಾಸಣ ಚೆಕ್‌ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಕೂಡುಮಜಲು ಮುದಿಯಾರು ಸದಾಶಿವ ಗೌಡ (58) ಮೃತರು. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಶನಿವಾರ ರಾತ್ರಿ ಜಾಲ್ಸೂರಿನ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗೆ ವೇಳೆಗೆ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಅರಣ್ಯ ಇಲಾಖೆಯ ಸಿಬಂದಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸುಳ್ಯದ ಖಾಸಗಿ […]

ಬಂಟ್ವಾಳ: ಜೋಕಾಲಿ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು.

ಬಂಟ್ವಾಳ ಡಿ. 09: ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿ ಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

ಕುಂದಾಪುರ:ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ದಿವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಡಿಸೆಂಬರ್ 08 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಕಿರಿಮಂಜೇಶ್ವರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನತಾ ಶನಯ ಶಾಲಾ ವಾರ್ಷಿಕೋತ್ಸವ.

ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ಸಂಭ್ರಮದಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭ ಜನತಾ ಶನಯ 2024 ಅದ್ದೂರಿಯಾಗಿ ಎರಡು ದಿನಗಳ ಕಾಲ ಜರುಗಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ಸರ್ವಾಂಗೀಣ ಸಾಧನೆಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಗಣೇಶ ಮೊಗವೀರರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶ್ರೇಷ್ಠವಾದ ಗುಣಮಟ್ಟದ ಶಿಕ್ಷಣವನ್ನು […]