ಉಡುಪಿ: ಕುರಿ-ಮೇಕೆ ಘಟಕ ಅನುಷ್ಠಾನ; ಅರ್ಜಿ ಆಹ್ವಾನ

ಉಡುಪಿ, ಡಿ.05: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ವತಿಯಿಂದ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಠ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನದೊಂದಿಗೆ 10+1 ಕುರಿ/ಮೇಕೆ ಘಟಕ ಪೂರೈಕೆ ಯೋಜನೆಯನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ /ತಾಲೂಕು ಗಳಲ್ಲಿಯೂ […]
ಕುಂದಾಪುರ: ಮೂಡ್ಲಕಟ್ಟೆ ಅಲೈಡ್ ಹೆಲ್ತ್ ಸೈನ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್ ಓರಿಯಂಟೇಷನ್ ಕಾರ್ಯಕ್ರಮ.

ಕುಂದಾಪುರ: ಐ.ಎಂ.ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ಪ್ರಾರಂಭ ಹಾಗು ಒರಿಎಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ಸ್ವಾತಿ ನಾಯಕ್ ನಗರ್ (ಎಂ.ಬಿ.ಬಿ.ಎಸ್, ಎಂ ಡಿ ಮೈಕ್ರೋಬೈಯೋಲಾಜಿ ಹಾಗೂ ನ್ಯೂರೋವೈರೋಲೋಜಿ) ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಂವಹನ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಇದು ಮುಂದಿನ ಜೀವನದ ಯಶಸ್ಸಿಗೆ ನಾಂದಿ ಎಂದು ತಿಳಿಸಿದರು. ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ […]
ಕುಂದಾಪುರ: ಡಿಸೆಂಬರ್ 7 ರಂದು ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಬಿಸಿನೆಸ್ ಡೇ.

ಕುಂದಾಪುರ : ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯವಹಾರ ದಿನ ವಿ-ವಿಸ್ತಾರ್ 2k24 ಡಿಸೆಂಬರ್ 7 ಬೆಳಿಗ್ಗೆ 9 ಗಂಟೆಯಿಂದ ಕಾಲೇಜು ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅರೇಕಾ ಟಿ ಇದರ ಸಂಸ್ಥಾಪಕ, ಸಿಇಓ ನಿವೇದನ್ ನೆಂಪೆ ಉದ್ಘಾಟಿಸಲಿದ್ದಾರೆ. ಶ್ರೀ ವೆಂಕಟರಮಣ ದೇವ್ ಎಜ್ಯುಕೇಶನ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿ.ಎಸ್ ಸುರೇಶ ಶೆಟ್ಟಿ ಉಪ್ಪುಂದ, ದಿನೇಶ ಹೆಗ್ಡೆ ಮೊಳಹಳ್ಳಿ ಭಾಗವಹಿಸಲಿದ್ದಾರೆ. ಟ್ರಸ್ಟ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, […]
ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತ: ಮಹಿಳೆ ಮೃತ್ಯು.

ಹೈದರಾಬಾದ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪ-2 ಚಿತ್ರ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ನಡುವೆ ದುಃಖಕರ ಘಟನೆಯೊಂದು ನಡೆದಿದ್ದು, ಅಭಿಮಾನಿಗಳ ಮಧ್ಯೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಹೈದರಾಬಾದ್ನ ಆರ್ಟಿಸಿ ಕ್ರಾಸ್ ರೋಡ್ನ ಸಂಧ್ಯಾ ಥಿಯೇಟರ್ನಲ್ಲಿ ಬೆನಿಫಿಟ್ ಶೋ ಏರ್ಪಡಿಸಲಾಗಿತ್ತು. ಈ ಶೋಗೆ ನಾಯಕ ಅಲ್ಲು ಅರ್ಜುನ್ ಆಗಮಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ರಾತ್ರಿ […]
ಸುಳ್ಯ: ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು.

ಮಂಗಳೂರು: ಮದ್ಯಕ್ಕೆ ಇಲಿ ಪಾಷಾಣವನ್ನು ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದ ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಪಾಲ್ತಾಡು ಗ್ರಾಮದ ಚೆನ್ನಾವರ ಪಟ್ಟೆಯ ಮಹಾಬಲ ರೈ ಅವರ ಪುತ್ರ ಹರ್ಷಿತ್ ರೈ (29) ಮೃತರು. ಹರ್ಷಿತ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಸುಮಾರು ವರ್ಷಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ನ. 21ರಂದು ಸಂಜೆ ಹರ್ಷಿತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಲಿಗೆ ಉಪಯೋಗಿಸುವ ಇಲಿ ಪಾಷಾಣವನ್ನು ಮದ್ಯಕ್ಕೆ ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದರು. ಬಳಿಕ […]