ದುಬೈನ ಯುವತಿಯರ ತಂಡದಿಂದ ಹುಲಿವೇಷ

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮೇಳೈಸಿದೆ. ಇಂದು ಜನ್ಮಾಷ್ಟಮಿಯ ವೈಭವವಾದರೆ ಮಂಗಳವಾರ ಐತಿಹಾಸಿಕ ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಉಡುಪಿಯ ಎಲ್ಲೆಡೆ ತಾಸೆ,ಬ್ಯಾಂಡ್ ಪೆಟ್ಟು ಕೇಳಿಬರುತ್ತಿದೆ. ತಾಸೆ ಏಟಿಗೆ ಅಲ್ಲಲ್ಲಿ ಹುಲಿಕುಣಿತ ತಂಡಗಳು ಪ್ರದರ್ಶನ ಮಾಡುತ್ತಿದೆ. ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮದಲ್ಲಿ ಹತ್ತಾರು ಹುಲಿವೇಷ ತಂಡಗಳು ಇವೆ. ರಾತ್ರಿ ಊದು ಪೂಜೆಯ ಬಳಿಕ ಬಣ್ಣ ಹಾಕಿಕೊಂಡು ಪ್ರದರ್ಶನ ಮಾಡುತ್ತಿದೆ.ಈ ಬಾರಿ ವಿಶೇಷವಾಗಿ ದುಬೈ ನ ಯುವತಿಯರ ತಂಡ ಹುಲಿವೇಷಕ್ಕಾಗಿ ಉಡುಪಿಗೆ ಆಗಮಿಸಿದೆ.ಅಪ್ಪೆನ ಮೋಕೆದ ಜೋಕುಲು ದುಬೈ […]
ಮಾಳದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ; ಬೆಚ್ಚಿಬಿದ್ದ ಗ್ರಾಮಸ್ಥರು

ಉಡುಪಿ: ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮೇಘರಾಜ್ ಎಂಬುವವರ ಮನೆಯಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಬೃಹತ್ ಕಾಳಿಂಗ ಸಂರ್ಪವನ್ನು ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದಾರೆ. ಕಾಳಿಂಗ ಸರ್ಪ ಕಾಣಿಸಿಕೊಂಡ ತಕ್ಷಣವೇ ಸ್ಥಳೀಯರು ಉರಗ ರಕ್ಷಕರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ರಕ್ಷಕ ಜಾನ್ ಮೃತ್ಯುಂಜಯ ಅವರು ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದರು. ಸಾಕಷ್ಟು ಹರಸಾಹಸದ ಬಳಿಕ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಯಿತು. ಬಳಿಕ ರಕ್ಷಿತಾರಣ್ಯಕ್ಕೆ ಕಾಳಿಂಗ ಸರ್ಪವನ್ನು ಬಿಡಲಾಯಿತು. ಕಾಳಿಂಗ ಸರ್ಪ ಸೆರೆ […]
ಕೃಷ್ಣನೂರು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ

ಉಡುಪಿ: ಪೊಡವಿಗೊಡೆಯನ ನಾಡಿನಲ್ಲಿ ಅಷ್ಟಮಿಯ ಸಂಭ್ರಮ ಕಳೆಗಟ್ಟಿದ್ದು, ಶ್ರೀ ಕೃಷ್ಣಮಠದ ಆವರಣ ಸಹಿತ ಇಡೀ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಅಷ್ಟಮಿಯ ವೈಭವ ಕಂಡುಬರುತ್ತಿದೆ. ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಮಠದೊಳಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮ, ಒಳಗಿನ ಅಲಂಕಾರ, ನೈವೇದ್ಯ ಹಾಗೂ ಪ್ರಸಾದದ ರೂಪದಲ್ಲಿ ನೀಡುವ ಲಡ್ಡು, ಚಕ್ಕುಲಿ ಇತ್ಯಾದಿಗಳ ಸಿದ್ದತೆ ಭರದಿಂದ ಸಾಗಿದೆ. ಬೆಳಗ್ಗೆಯಿಂದಲೇ ಶ್ರೀ ಕೃಷ್ಣಮಠದಲ್ಲಿ ಅಷ್ಟಮಿ ಸಂಭ್ರಮ ಡೋಲು ಉತ್ಸವದೊಂದಿಗೆ ಆರಂಭಗೊಂಡು ಮಂಗಳವಾರ ವಿಟ್ಲಪಿಂಡಿ ಉತ್ಸವ […]
ಉಡುಪಿ: ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಗುಜರಾತ್’ನ ಇಬ್ಬರು ಆರೋಪಿಗಳ ಬಂಧನ.

ಉಡುಪಿ: ಉಡುಪಿ ವೈದ್ಯರೊಬ್ಬರಿಗೆ ಮುಂಬಯಿ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್ ಭಾಯಿ/ಗಣೇಶ್ ಭಾಯಿ (44), ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಆಕಾಶವಾಣಿ ಚೌಕ್ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್ ಫೋನ್‌ಗಳನ್ನು ಹಾಗೂ […]
ಕಾರ್ಕಳ ಅತ್ಯಾಚಾರ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ: ಉಡುಪಿ ಎಸ್ಪಿ

ಕಾರ್ಕಳ: ಕಾರ್ಕಳ ಅಯ್ಯಪ್ಪ ನಗರದ ಯುವತಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿದ್ದ ಅಲ್ತಾಫ್ ಹಾಗೂ ಶ್ರಾವೆದ್ ರಿಚರ್ಡ್ ಕ್ವಾಡ್ರಸ್ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಉಡುಪಿ ಎಸ್.ಪಿ. ಡಾ.ಅರುಣ್‌ಕುಮಾರ್ ತಿಳಿಸಿದ್ದಾರೆ. ಆರೋಪಿಗಳನ್ನು ಶನಿವಾರ ಕಾರ್ಕಳದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ ನಗರ ಠಾಣೆ ಪೊಲೀಸರ ಮನವಿಯಂತೆ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಿಧಿಸಿ […]