ಉಡುಪಿ:ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಆಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ, ಅವುಗಳಿಂದ ದೂರವಿರುವ ಹಾಗೇ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಮಾನ್ಯವಾಗಿ ಯುವಜನರು ಹೆಚ್ಚು ಮಾದಕ ವಸ್ತುಗಳಿಗೆ ವ್ಯಾಸನಿಗಳಾಗುತ್ತಿದ್ದಾರೆ. ಶಾಲಾ- ಕಾಲೇಜುಗಳಲ್ಲಿ ಅವುಗಳ ಬಳಕೆಯಿಂದ ಆಗುವ […]
ಉಡುಪಿ:ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ […]
ವಿಕಲಚೇತನರು ಆತ್ಮವಿಶ್ವಾಸದಿಂದ ಬದುಕುವ ಅವಕಾಶ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ (ಮಿನಿಹಾಲ್) ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ […]
ಉಡುಪಿ:ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ […]
ಕೋಟ: ಅಕಾಲಿಕ ಮಳೆಗೆ ಕಲ್ಲಂಗಡಿ ಬೆಳೆ ನಾಶ; ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ಉಡುಪಿ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಹಲವು ಕೃಷಿಕರು ಸಂಕಷ್ಟ ಅನುಭವಿಸಿದ್ದಾರೆ. ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಕೋಟ ಗಿಳಿಯಾರು ಗ್ರಾಮದ ಹರ್ತಟ್ಟು ನಲ್ಲಿ ಕಲ್ಲಂಗಡಿ ಕೃಷಿ ನಾಶವಾಗಿದೆ. ಶ್ರೀಧರ ಗಾಣಿಗ ಅವರು ಬೆಳೆಸಿದ್ದ ಕಲ್ಲಂಗಡಿ ಕೃಷಿ ಮಳೆಗೆ ಆಹುತಿಯಾಗಿದೆ. ಸುಮಾರು ಮೂರು ಎಕರೆ ಜಾಗದಲ್ಲಿ ಎರಡು ತಿಂಗಳುಗಳ ಕಾಲ ಶ್ರಮವಹಿಸಿ ಶ್ರೀಧರ ದೇವಾಡಿಗ ಕಲ್ಲಂಗಡಿ ಬೆಳೆಸಿದ್ದರು. ಆದರೆ ನಿನ್ನೆ ತಡರಾತ್ರಿ ಸುರಿದ ಅಕಾಲಿಕ ಮಳೆಗೆ ಕಲ್ಲಂಗಡಿ ಬೆಳೆ ನಾಶವಾಗಿದೆ. ಇದರ ಪರಿಣಾಮ ಶ್ರೀಧರ್ ಅವರು ಲಕ್ಷಾಂತರ […]