ವೃತ್ತಿ ಧರ್ಮ ಮತ್ತು ಸಾಮಾಜಿಕ ಜವಾಬ್ದಾರಿ- ನ್ಯಾಯವಾದಿಯ ಯಶಸ್ಸಿನ ಗುಟ್ಟು-ಆರೂರು ಸುಕೇಶ್ ಶೆಟ್ಟಿ ನ್ಯಾಯವಾದಿ,ಉಡುಪಿ.

ಗೆಲ್ಲುವ ಪ್ರಕರಣಗಳ ಸಂಖ್ಯೆಯ ಆಧಾರದಲ್ಲಿ ವಕೀಲರ ಯಶಸ್ಸನ್ನು ಅಳೆಯಲಾಗುವುದಿಲ್ಲ. ಅವರುಗಳು ಸಮಾಜಕ್ಕೆ ನೀಡಿದ ಕೊಡುಗೆಯು ಮುಖ್ಯ. ಬಡವರು, ದಮನಿತರ ಪರವಾಗಿ ನ್ಯಾಯಕ್ಕಾಗಿ ಸ್ವಾರ್ಥವಿಲ್ಲದೇ ಹೋರಾಡಿದವನೇ ನಿಜವಾಗಿಯೂ ಯಶ್ವಸಿ ವಕೀಲ. ಈ ಮಾತುಗಳನ್ನು ಕರಿಕೋಟು ಹಾಕಿದ ಆರಂಭದ ದಿನಗಳಲ್ಲಿ ನನ್ನ ಗುರುಗಳು ನನಗೆ ಹೇಳುತ್ತಿದ್ದ ನೆನಪು. ಅನೇಕರಿಗೆ ಇಂದಿಗೂ ನ್ಯಾಯವಾದಿ ಹಾಗು ವಕೀಲ ವೃತ್ತಿಯ ಬಗೆಗೆ ತಪ್ಪು ಕಲ್ಪನೆಗಳಿರುವುದು ನಗ್ನ ಸತ್ಯ. ಇವೆಲ್ಲದರ ಜೊತೆಗೆ ಕಾನೂನು ಕ್ಷೇತ್ರದ ಆಳ, ಅಗಲ, ಅವಕಾಶಗಳ ಬಗೆಗೆ ಸಾರ್ವಜನಿಕರಿಗೆ, ಯುವಪೀಳಿಗೆಯ ವಕೀಲರಿಗೆ, ವಕೀಲರಾಗಲು […]
ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿ ಕಾರ್ಯಾಗಾರ : ಸಮಾರೋಪ ಸಮಾರಂಭ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜ್ಯ ಶಾಸ್ತ್ರವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೇರಣಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಕುರಿತು ಉಚಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ರವಿವಾರ ಅಜ್ಜರಕಾಡು ನಗರ ಕೇಂದ್ರ ಗ್ರಂಥಾಲಯ ಇಲ್ಲಿಯ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು. […]
ಉಡುಪಿ:ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಭಾಗದಲ್ಲಿಯೂ ಇದರ ಪರಿಣಾಮ ಇರುವುದರಿಂದ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್, ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾಸಮಿತಿಯ ಸದಸ್ಯರು ಕಡ್ಡಾಯವಾಗಿ, ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು. ಸಾರ್ವಜನಿಕರು ಹಾಗೂ ಮೀನುಗಾರರುನದಿ, ನೀರಿರುವ ಪ್ರದೇಶ ಮತ್ತು […]
ಉಡುಪಿ:ಮಕ್ಕಳ ಚಲನವಲನಗಳ ಮೇಲೆ ಗಮನಹರಿಸಿ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ, ಹಾಗೂ ಕಿಂಡಿ ಅಣೆಕಟ್ಟಿನ ಹಿನ್ನೀರುಮುಂತಾದ ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಹಿನ್ನೆಲೆ, ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಲೋಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್ -2024’ ಸಂಪನ್ನ

ಉಡುಪಿ ಲೋಂಬಾರ್ಡ್ ಮೆಮೋರಿಯಲ್ ಹಾಸ್ಪಿಟಲ್ (ಮಿಷನ್ ಆಸ್ಪತ್ರೆ)ಯ 101 ನೇ ವಾರ್ಷಿಕೋತ್ಸವದ ಪ್ರಯುಕ್ತ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಉಡುಪಿ ರನ್ನರ್ಸ್ ಕ್ಲಬ್‌ನ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಉಡುಪಿ ಮ್ಯಾರಥಾನ್-2024 ಭಾನುವಾರ ಅದ್ಧೂರಿಯಾಗಿ ನಡೆಯಿತು. ರಾಜ್ಯ, ಹೊರರಾಜ್ಯದ ಜತೆಗೆ ಇಥಿಓಪಿಯಾ, ಕೀನ್ಯಾ, ಜರ್ಮನ್, ಉಗಾಂಡದ ಅಂತಾರಾಷ್ಟ್ರೀಯ ಓಟಗಾರರು ಭಾಗವಹಿಸಿದ್ದು, ಮುಖ್ಯ ಅಕರ್ಷಣೆ ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಗಿತ್ತು. 3500 ಕ್ಕೂ ಅಕ ಮಂದಿ ಭಾಗವಹಿಸಿದ್ದರು. ಬೆಳಗ್ಗಿನ ಜಾವ 5 ಗಂಟೆಗೆ ಆರಂಭವಾದ ಮ್ಯಾರಥಾನ್ 9 ಗಂಟೆಗೆ ಸಮಾಪನಗೊಂಡಿತು. ಶಾಸಕ ಯಶ್ಪಾಲ್ ಸುವರ್ಣ ಚಾಲನೆ […]