ಕಾಂಗ್ರೆಸ್ ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ

ಬೆಳಗಾವಿ: ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ‌. ಕಾಗವಾಡ ತಾಲ್ಲೂಕಿನ ಐನಾಪೂರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ ಎಂದರು. ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ […]

ವಿಧಾನ ಪರಿಷತ್ತಿನ ಸಭಾನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿಯುಕ್ತಿ

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ನಿಯುಕ್ತಿಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ಸಭಾ ನಾಯಕರಾಗಿ ಕಾರ್ಯನಿರ್ವಹಿಸಲು ನಾಮನಿರ್ದೇಶನ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

ಗಾಂಧಿನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ನಿನ್ನೆ ರಾತ್ರಿ ಕೇಂದ್ರ ಗೃಹ  ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ ತಕ್ಕಂತೆ ಮುಖ್ಯಮಂತ್ರಿ […]

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಫಿಟ್ ಇಂಡಿಯಾ ಫ್ರೀಡಂ ಓಟ- ಅಭಿಯಾನ

ಶಿರ್ವ: ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ವತಿಯಿಂದ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ರ ಅಭಿಯಾನಕ್ಕೆ ರಾಷ್ಟ್ರವ್ಯಾಪಿ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ಟೋಬರ್ 2 ರವರೆಗೆ, ಪ್ರತಿ ಜಿಲ್ಲೆ ಮತ್ತು ಪ್ರತಿ ಹಳ್ಳಿಯ ಜನರು ಈ ಚಳವಳಿಯಲ್ಲಿ ಭಾಗವಹಿಸುತ್ತಾರೆ. ಪ್ರತಿಮನೆಯ ನಾಗರಿಕರನ್ನು ಸದೃಢವಾಗಿಡಲು ‘ಆರೋಗ್ಯವೇ ಭಾಗ್ಯ’ ಮಂತ್ರವನ್ನು ಸದಸ್ಯರು ತಪ್ಪದೇ ಪಾಲಿಸಿ, ದೈಹಿಕ ಚಟುವಟಿಕೆಯ ಮೂಲಕ ಯುವಕರು ಜನಾಂದೋಲನ ಮಾಡಬೇಕೆಂದು ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ […]

ರಸ್ತೆ ಅಪಘಾತ: ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್‌ ಸ್ಥಿತಿ ಗಂಭೀರ

ಹೈದರಾಬಾದ್‌: ಬೈಕ್ ಸ್ಕಿಡ್ ಆಗಿ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್‌ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ಹೈದರಾಬಾದ್‌ನ ಕೇಬಲ್‌ ಸೇತುವೆಯ ಮೇಲೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾಯಿ ತೇಜ್ ಅವರ ಸ್ಥಿತಿ ಗಂಭೀರವಾಗಿದ್ದು, ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ […]