ಉಡುಪಿ:ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ […]

ತಮಿಳುನಾಡು: ಫೆಂಗಲ್‌ ಚಂಡಮಾರುತದ ಪರಿಣಾಮದಿಂದ ಚೆನ್ನೈ ವಿಮಾನ ನಿಲ್ದಾಣ ಬಂದ್‌; ರೆಡ್‌ ಅಲರ್ಟ್ ಘೋಷಣೆ

ಚೆನ್ನೈ: ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಭಾರೀ ಮಳೆಯಾಗಿದ್ದು, ಜನರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಶನಿವಾರ (ನ.30) ಮುನ್ಸೂಚನೆ ನೀಡಿದ್ದು, ಫೆಂಗಲ್‌ ಚಂಡಮಾರುತ ಕಾರೈಕಲ್‌ ಮತ್ತು ಮಹಾಬಲಿಪುರಂ ನಡುವೆ ಅಪ್ಪಳಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯ ಕಾರೈಕಲ್‌ ಮತ್ತು ಮಹಾಬಲಿಪುರಂ ನಡುವೆ ಫೆಂಗಲ್‌ ಚಂಡಮಾರುತ ಹಾದು ಹೋಗಲಿದ್ದು, ಗಂಟೆಗೆ 70-80 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವಿವರಿಸಿದೆ. ಚಂಡಮಾರುತದಿಂದಾಗಿ ಹವಾಮಾನ ಬದಲಾವಣೆಯಾಗಲಿದ್ದು, […]

ಕರ್ನಾಟಕದ ಗ್ಯಾರಂಟಿ ಯೋಜನೆಗಳು ಬೇರೆ ರಾಜ್ಯಗಳಿಂದ ಅನುಕರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು. ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ‌ಜಾರಿಗೆ ತರಲಾಗುತ್ತಿದೆ. ಭಾರತದ […]

ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ

ಉಡುಪಿ: ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡೋದಕ್ಕೆ, ಸಾಮಾಜದ ಸ್ವಾಸ್ಥ್ಯ ಕೆಡಿಸುವುದು ಸ್ವಾಮೀಜಿಗಳ ಕೆಲಸ ಅಲ್ಲ. ಸ್ವಾಮೀಜಿಗಳ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ. ಸ್ವಾಮೀಜಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ನಾವೆಲ್ಲಾ‌ ಭಾರತದಲ್ಲಿದ್ದೇವೆ ಅಂಬೇಡ್ಕರ್ ಅವರ ಸಂವಿಧಾನ ಇದೆ. ಈ ದೇಶದಲ್ಲಿ ರಾಷ್ಟ್ರಪತಿಯಿಂದ ಹಿಡಿದು ಜನಸಾಮಾನ್ಯರಿಗೂ […]

ಡಿಸೆಂಬರ್ 1ರಿಂದ ನಗರಸಭೆ ಕುಡಿಯುವ ನೀರಿನ ದರದಲ್ಲಿ ಶೇ. 18ರಿಂದ ಶೇ. 25ರ ವರೆಗೆ ಕಡಿತ

ಉಡುಪಿ: ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ ಅವಧಿಯಲ್ಲಿ ಅವೈಜ್ಞಾನಿಕ ಕುಡಿಯುವ ನೀರಿನ ದರ ಏರಿಕೆಯಿಂದ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಿರುವ ಹಿನ್ನಲೆಯಲ್ಲಿ ಉಡುಪಿ ಜನತೆಯ ಹಿತದೃಷ್ಟಿಯಿಂದ ಗೃಹ ಬಳಕೆಯ ಸಂಪರ್ಕಕ್ಕೆ ನೀರಿನ ಬಳಕೆಗೆ ಅನುಗುಣವಾಗಿ ಶೇ. 18 ರಿಂದ ಶೇ. 25 ರವರೆಗೂ […]