ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆಯಲ್ಲಿ ದೀಪೋತ್ಸವ ಮಹೋತ್ಸವದ ಸಂಭ್ರಮ.

ಉಡುಪಿ:ಭಗವದ್ಬಕ್ತರೇ ಇದೇ ಬರುವ ಡಿಸೆಂಬರ್ ತಿಂಗಳ ತಾರೀಕು 1.12.2024 ಭಾನುವಾರ ಕಾರ್ತಿಕ ಅಮಾವಾಸ್ಯೆಯ ಪರ್ವಕಾಲದಂದು ಶ್ರೀ ಕ್ಷೇತ್ರದ ದೀಪೋತ್ಸವವು ರಂಗ ಪೂಜಾ ಸಹಿತವಾಗಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಸಂಜೆ ಗಂಟೆ 6.00 ರಿಂದ ದೀಪೋತ್ಸವದ ದೀಪ ಪ್ರಜ್ವಲನೆ ಆರಂಭವಾಗಲಿದೆ.ಈ ದೀಪೋತ್ಸವದಲ್ಲಿ ಭಕ್ತರು ತಮ್ಮ ಕಾಣಿಕೆಗಳನ್ನು, ಅಥವಾ ಎಣ್ಣೆ ಬತ್ತಿ ಹಣತೆಯನ್ನು ಕ್ಷೇತ್ರಕ್ಕೆ ಸಮರ್ಪಿಸಬಹುದು.🙏 ಧನ ಸಹಾಯ ಮಾಡುವವರು ಈ ಗೂಗಲ್ ಪೇ ನಂಬರ್ ಅನ್ನು ಸಂಪರ್ಕಿಸಿ:Google pay number: […]
ಉಡುಪಿ:ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9.30 ಕ್ಕೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ, 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3 ಗಂಟೆಗೆ […]
ಉಡುಪಿ:ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವ : ಮದ್ಯ ಮಾರಾಟ ನಿಷೇಧ

ಉಡುಪಿ: ನವೆಂಬರ್ 30 ರಂದು ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಪುರ ಮೆರವಣಿಗೆ ಹಾಗೂ ಕಾರ್ಯಕ್ರಮ ನಡೆಯುವ ಹಿನ್ನೆಲೆ, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನವೆಂಬರ್ 30 ರಂದು […]
ಉಡುಪಿ:ಡ್ರೋನ್ ಆಧಾರಿತ ಫೋಟೋಗ್ರಾಫಿ, ವೀಡಿಯೋಗ್ರಾಫಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ & ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡದ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ:ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ : ನಿಷೇಧಾಜ್ಞೆ ಜಾರಿ

ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ 33 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವಂತೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು, ಆಯೋಗದ ನಿರ್ದೇಶನದಂತೆ ಡಿಸೆಂಬರ್ 8 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ […]