ಕುಂದಾಪುರ: ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಕುಂದಾಪುರ: ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕುಂದಾಪುರ ತಾಲೂಕಿನ ಆಲೂರು ಬಳಿ ನಡೆದಿದೆ. ದೀಪಿಕಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಗ 108 ಆಂಬ್ಯುಲೆನ್ಸ್ ಕರೆ ಮಾಡಿ ತಿಳಿಸಲಾಯಿತು. ಅದರಂತೆ ಸ್ಥಳಕ್ಕೆ ಬಂದ ಆಂಬ್ಯುಲೆನ್ಸ್ ನಲ್ಲಿ ದೀಪಿಕಾಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಸಂದರ್ಭದಲ್ಲಿ ಹೆರಿಗೆ ನೋವು ಜಾಸ್ತಿಯಾಗಿ ದಾರಿ ಮಧ್ಯೆ ಆಂಬ್ಯುಲೆನ್ಸ್ ನಲ್ಲಿ ಹೆರಿಗೆ ಮಾಡಲಾಯಿತು. ಆಂಬ್ಯುಲೆನ್ಸ್ ನಲ್ಲಿದ್ದ ನರ್ಸ್ ರಾಘವೇಂದ್ರ ಶೆಟ್ಟಿ ಮತ್ತು ಚಾಲಕ ಅಶೋಕ್ ಮೊಗವೀರ ಇದ್ದರು. ತಾಯಿ […]

ಕೊಡವೂರು: ಮನೆಮನೆಗೆ ಲಸಿಕೆ ಅಭಿಯಾನ

ಕೊಡವೂರು: ಕೊಡವೂರು ವಾರ್ಡಿನ ಸಂಘ-ಸಂಸ್ಥೆಗಳ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ, ಅಂಗವಿಕಲ ದುರ್ಬಲರ ಮನೆಗೆ ಹೋಗಿ ಲಸಿಕೆ ಪಡೆಯುವಂತೆ ಅಭಿಯಾನವನ್ನು ಕೈಗೊಂಡಿದ್ದಾರೆ. ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಅವರು, ಯಾರಿಗೆ ಲಸಿಕಾ ಕೇಂದ್ರಕ್ಕೆ ಬರಲು ಸಾಧ್ಯವಿಲ್ಲ. ಅಂಗವಿಕಲರು, ದುರ್ಬಲವಾಗಿರುವ ಜನರನ್ನು ಗುರುತಿಸಿ ಅವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಯಿತು. ಶೇ. 100ರಷ್ಟು ಕೋವಿಡ್ ಲಸಿಕಾ ಮುಕ್ತ ವಾರ್ಡ್ ಆಗಿ ಮಾಡುವ ಸಲುವಾಗಿ ಈ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಪ್ರೈಮರಿ ಹೆಲ್ತ್ ಸೆಂಟರ್ ಮಲ್ಪೆಯ […]

ಕೆ.ಪಿ‌‌. ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ವಿಶ್ವಕರ್ಮ‌ ಮಹಾಸಭಾದಿಂದ ಬಿಜೆಪಿ‌ ರಾಜ್ಯಾಧ್ಯಕ್ಷರಿಗೆ ಮನವಿ

ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ಅವರಿಗೆ ಸಚಿವ ಸ್ಥಾನ‌ ನೀಡುವಂತೆ ವಿಶ್ವಕರ್ಮ‌ ಮಹಾಸಭಾ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವಕರ್ಮ ಮಹಾಸಭಾ ಸಂಘಟನೆಯ ಜಿಲ್ಲಾಧ್ಯಕ್ಷ ನೇರಂಬಳ್ಳಿ ರಮೇಶ್ ಆಚಾರ್,ಯುವ ಘಟಕಾಧ್ಯಕ್ಷ ಕೋಟ ರಾಮಕೃಷ್ಣ ಆಚಾರ್,ಗೌರವಾಧ್ಯಕ್ಷ ಗಂಗಾಧರ ಆಚಾರ್ ಬಾರ್ಕೂರು,ಬೈಂದೂರು ವಿಶ್ವಕರ್ಮ ಸಂಘಟನೆಯ ಅಧ್ಯಕ್ಷ ನಾರಾಯಣ ಆಚಾರ್,ಶಶಿಕಾಂತ್ […]

“ಅರಿಶಿನ ಗಣಪತಿ ಅಭಿಯಾನ “ ದಲ್ಲಿ ಭಾಗವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಈ ಬಾರಿಯ ಗೌರಿ ಗಣೇಶ ಹಬ್ಬ ಸನ್ನಿಹಿತವಾಗುತ್ತಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣಗಳನ್ನು ಹೊಂದಿದ ಲಕ್ಷಾಂತರ ಗಣಪತಿ ವಿಗ್ರಹಗಳನ್ನು ನದಿ, ಕೆರೆ ಕಟ್ಟೆಗಳಲ್ಲಿ ವಿಸರ್ಜನೆಗೊಳಿಸುವುದರಿಂದ ನೀರಿನ ಮೂಲಗಳು ಮಾಲಿನ್ಯಗೊಳ್ಳುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಪಿಒಪಿ ಹಾಗೂ ಬಣ್ಣದ ಗಣಪತಿ ಮೂರ್ತಿಗಳನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಗೂ ಕೋವಿಡ್-19 ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ಬಾರಿಯ ಗೌರಿ ಗಣೇಶ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸುವ ಅನಿವಾರ್ಯತೆಯಿದೆ, ವಿಷಯುಕ್ತ […]

ಸಾರ್ವಜನಿಕ ಗಣೇಶೋತ್ಸವ ಓಕೆ, ಆದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು ಜೋಕೆ!

ಬೆಂಗಳೂರು: ಹಲವು ಷರತ್ತುಬದ್ಧ ನಿಯಮಗಳೊಂದಿಗೆ ಗರಿಷ್ಠ ಐದು ದಿನಗಳ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ಬೆಂಗಳೂರಿನಲ್ಲಿ  ಹಬ್ಬದ ನಿಯಮ ಪಾಲನೆಯ ಉಸ್ತುವಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ. ಅನುಮತಿ ಕೊಟ್ಟ ಸ್ಥಳಗಳು, ಸರ್ಕಾರಿ, ಖಾಸಗಿ ಖಾಲಿ ಜಾಗಗಳು,  ಮೈದಾನಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಬೇಕು.  ದೇವಸ್ಥಾನಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ನೀಡಲಾಗಿದೆ. ಇನ್ನು, ಬೆಂಗಳೂರು ಮಾತ್ರವಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ವೇಳೆ ಜಿಲ್ಲಾಡಳಿತಗಳು ನಿಗಾ ವಹಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೇವಸ್ಥಾನ ಮತ್ತು ಮನೆಗಳಲ್ಲಿ ಹೊರತುಪಡಿಸಿ, ಸಾರ್ವಜನಿಕವಾಗಿ […]