ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಕೃಷಿ ಮೂಲಭೂತ ಸೌಕರ್ಯಾಭಿವೃದ್ಧಿ ನಿಧಿ ಯೋಜನೆಯಡಿಗೋದಾಮುಗಳು, ಆಧುನಿಕ ಸೈಲೊಗಳು, ಈ – ಮಾರ್ಕೆಟಿಂಗ್ ವೇದಿಕೆ, ಸರಬರಾಜು ಸರಪಳಿ ಸೇವೆಗಳಿಗೆ, ಪ್ಯಾಕ್ ಹೌಸ್ ಮತ್ತು ಬಾಡಿಗೆಸೇವಾ ಕೇಂದ್ರ, ಜೋಡಣೆ, ವಿಂಗಡಣೆ, ಶ್ರೇಣೀಕರಣ ಘಟಕ, ಶಿಥಲೀಕರಣ ಘಟಕ, smart and Precision agriculture ಮೂಲಭೂತ ಸೌಕರ್ಯ, refrigerated transportation ಗುಚ್ಚ ಬೆಳೆಗಳ ಸರಬರಾಜು ಸರಪಳಿ ಮೂಲಭೂತ ಸೌಕರ್ಯ, ಸಂಗ್ರಹಣಾ ಕೇಂದ್ರಗಳು, ಸಾವಯವ ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು ಮತ್ತುಜೈವಿಕ ಪ್ರಚೋದಕ ಘಟಕಗಳು, ಹಣ್ಣು ಮಾಗಿಸುವಘಟಕಗಳು, ಸಾಮೂಹಿಕ […]

ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ:0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯಪ್ರಕಟಣೆ ತಿಳಿಸಿದೆ.

ಕಾರ್ಕಳ: ಅಮಲು ಪದಾರ್ಥ ನೀಡಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಉಡುಪಿ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿ ಹಬ್ಬದ ತಯಾರಿ ಜೋರು

ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜುಗೊಳ್ಳುತ್ತಿದೆ. ವಿಶೇಷವಾಗಿ ಕೃಷ್ಣ ಮಠವನ್ನೊಳಗೊಂಡ ಅಷ್ಟಮಠಗಳಲ್ಲಿ ತಯಾರಿ ಭರದಿಂದ ಸಾಗಿದ್ದು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅಘ್ರ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರ ವಿಟ್ಲಪಿಂಡಿ ಉತ್ಸವ ನಡೆಯಲಿದ್ದು ಹಬ್ಬ ಪರಾಕಾಷ್ಟೆ ತಲುಪಲಿದೆ.ಈ ಪ್ರಯುಕ್ತ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ವಿತರಿಸಲು ಸಾವಿರಾರು ಚಕ್ಕುಲಿ -ಉಂಡೆಪ್ರಸಾದ ತಯಾರಿಸಲಾಗುತ್ತಿದೆ. ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತಿದೆ.ಕಡೆಗೋಲು ಕೃಷ್ಣನಿಗೆ ಪ್ರಿಯವಾದ ಉಂಡೆ […]

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಅವರು ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ‌ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ […]